ಬೆಂಗಳೂರು, 18 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪುರಾತನ ಕಾಲದಿಂದಲೂ ಪ್ರಖ್ಯಾತಿ ಹೊಂದಿರುವ ಧಾರ್ಮಿಕ ಕ್ಷೇತ್ರವಾಗಿದೆ. ದೇವಾಲಯದಲ್ಲಿ 2025 ನೇ ಸಾಲಿನಲ್ಲಿ ಮಹಾಲಯ, ದಸರಾ, ದೀಪಾವಳಿ, ಕಾರ್ತಿಕ ಜಾತ್ರಾ ಮಹೋತ್ಸವಗಳು ವಿಜೃಂಭಣೆಯಿಂದ ನಡೆಯಲಿವೆ.
ಸೆಪ್ಟೆಂಬರ್ 19 ರಂದು ಮಹಾಲಯ ಜಾತ್ರೆ ಪ್ರಾರಂಭವಾಗಲಿದ್ದು, ಸೆಪ್ಟೆಂಬರ್ 20 ರಂದು ಚತುರ್ದಶಿ ಸ್ವಾಮಿಗೆ ಎಣ್ಣೆ ಮಜ್ಜನ ಸೇವೆ ಹಾಗೂ ವಿಶೇಷ ಸೇವೆ, ಉತ್ಸವಾದಿಗಳು, ಸೆಪ್ಟೆಂಬರ್ 21 ರಂದು ಮಹಾಲಯ ಅಮಾವಾಸ್ಯೆ, ಶ್ರೀ ಸ್ವಾಮಿಗೆ ಅಮಾವಾಸ್ಯೆ ವಿಶೇಷ ಸೇವೆ ಮತ್ತು ಉತ್ಸವಾದಿಗಳು ನಡೆಯಲಿವೆ ಎಂದು ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa