ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗಳಿಗೆ 618.75 ಕೋಟಿ ರೂ.
ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗಳಿಗೆ 618.75 ಕೋಟಿ ರೂ.
ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗಳಿಗೆ 618.75 ಕೋಟಿ ರೂ.


ಬೆಂಗಳೂರು, 18 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಅಭಿವೃದ್ಧಿ, ಮೂಲಸೌಕರ್ಯ, ಆರೋಗ್ಯ ಹಾಗೂ ಸಾಮಾಜಿಕ ನ್ಯಾಯಕ್ಕೆ ಸಂಬಂಧಿಸಿದ ಹಲವಾರು ಮಹತ್ವದ ನಿರ್ಣಯಗಳು ಕೈಗೊಳ್ಳಲಾಯಿತು.

ಸಹಕಾರ ಇಲಾಖೆಯಡಿ ಬೆಂಗಳೂರಿನ ದಾಸನಪುರ, ಕೋಲಾರ ಹಾಗೂ ಮೈಸೂರು ಎಪಿಎಂಸಿಗಳಲ್ಲಿ ಸಾರ್ವಜನಿಕ–ಖಾಸಗಿ ಸಹಭಾಗಿತ್ವದಲ್ಲಿ ಬಯೋ ಸಿಎನ್‌ಜಿ ಘಟಕಗಳನ್ನು ಸ್ಥಾಪಿಸಲು 74.88 ಕೋಟಿ ರೂ. ಅಂದಾಜು ವೆಚ್ಚಕ್ಕೆ ಸಂಪುಟ ಅನುಮೋದನೆ ನೀಡಿದೆ. ವಿಜಯಪುರ ಗ್ರೀನ್ಫೀಲ್ಡ್ ವಿಮಾನ ನಿಲ್ದಾಣದ ಅಭಿವೃದ್ಧಿ ಕಾಮಗಾರಿಗಳಿಗೆ 618.75 ಕೋಟಿ ರೂ. ಪರಿಷ್ಕೃತ ಅಂದಾಜು ಅಂಗೀಕಾರ ಕಂಡಿದೆ.

ಆರೋಗ್ಯ ಕ್ಷೇತ್ರದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಕಾರ್ಡಿಯಾಕ್ ಯೂನಿಟ್‌ಗೆ ಅಗತ್ಯ ವೈದ್ಯಕೀಯ ಉಪಕರಣಗಳ ಖರೀದಿಗೆ 10.89 ಕೋಟಿ ರೂ. ಮಂಜೂರಿಯಾಗಿದೆ. ಇದೇ ವೇಳೆ ಆರ್‌ಡಿಪಿಆರ್ ವಿಶ್ವವಿದ್ಯಾಲಯ ಆವರಣದಲ್ಲಿ 48.43 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗೆ ಸಹ ಅನುಮೋದನೆ ದೊರೆಯಿತು.

ಗದಗ ಜಿಲ್ಲೆಯ ರೋಣ ತಾಲ್ಲೂಕಿನ 9 ಕೆರೆಗಳಿಗೆ ಮಲಪ್ರಭಾ ಬಲದಂಡೆ ಕಾಲುವೆಯಿಂದ ನೀರು ಎತ್ತುವ ಯೋಜನೆಗೆ 43.50 ಕೋಟಿ ರೂ. ಹಾಗೂ ಅದೇ ಕಾಲುವೆಯ ವಿತರಣಾ ಶಾಖೆಗಳ ಆಧುನೀಕರಣಕ್ಕೆ 31.08 ಕೋಟಿ ರೂ. ಖರ್ಚು ಮಾಡಲು ಒಪ್ಪಿಗೆ ನೀಡಲಾಗಿದೆ.

ರಾಜ್ಯದ ಕಾರಾಗೃಹಗಳಲ್ಲಿ ಭದ್ರತೆಯನ್ನು ವೃದ್ಧಿಸಲು ಬಳ್ಳಾರಿ, ವಿಜಯಪುರ, ಧಾರವಾಡ, ಶಿವಮೊಗ್ಗ, ಬೆಳಗಾವಿ, ಮೈಸೂರು, ಕಲಬುರಗಿ ಹಾಗೂ ತುಮಕೂರು ಕೇಂದ್ರ ಹಾಗೂ ಜಿಲ್ಲಾ ಕಾರಾಗೃಹಗಳಲ್ಲಿ 10 Call Blocking System ಮೊಬೈಲ್ ಟವರ್‌ಗಳನ್ನು ಅಳವಡಿಸಲು 16.75 ಕೋಟಿ ರೂ. ಅನುದಾನ ಮಂಜೂರಿಯಾಗಿದೆ.

ಬೆಂಗಳೂರು ದಕ್ಷಿಣ ತಾಲ್ಲೂಕಿನ ಸರ್.ಎಂ.ವಿಶ್ವೇಶ್ವರಯ್ಯ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಛಲವಾದಿ ಸಮುದಾಯ ಭವನಕ್ಕೆ 22.33 ಕೋಟಿ ರೂ. ಪರಿಷ್ಕೃತ ಅಂದಾಜಿಗೆ ಅನುಮೋದನೆ ಸಿಕ್ಕಿದೆ. ಜೊತೆಗೆ ರಾಜ್ಯದ 90 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಫಿಟ್ಟರ್ ಹಾಗೂ ಎಲೆಕ್ಟ್ರಿಷಿಯನ್ ವೃತ್ತಿಗಳಿಗೆ ಅಗತ್ಯ ಯಂತ್ರೋಪಕರಣ ಖರೀದಿಗೆ 50 ಕೋಟಿ ರೂ. ವೆಚ್ಚಿಸಲು ನಿರ್ಧಾರ ಕೈಗೊಳ್ಳಲಾಗಿದೆ.

ಬೆಂಗಳೂರು ನಗರದಲ್ಲಿನ ಗಾಂಧಿನಗರ ಕ್ಷೇತ್ರದಲ್ಲಿ ವೈಟ್ ಟಾಪಿಂಗ್ ರಸ್ತೆ ಕಾಮಗಾರಿಗಳಿಗೆ 58.44 ಕೋಟಿ ರೂ. ಅಂದಾಜು ಒಪ್ಪಿಗೆ ಪಡೆದಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ನಿರ್ಧಾರ ಕೈಗೊಂಡಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನಲ್ಲಿ ಕರ್ನಾಳ್ ಏತನೀರಾವರಿ ಯೋಜನೆಗೆ 50.75 ಕೋಟಿ ರೂ. ಅನುಮೋದನೆ ದೊರೆತಿದೆ.

ಶಾಲಾ ಮಕ್ಕಳ ಬಿಸಿಯೂಟ ಸಿದ್ಧಪಡಿಸಲು ಅಗತ್ಯ ಪಾತ್ರೆ–ಪರಿಕರಗಳ ಖರೀದಿಗೆ 21.55 ಕೋಟಿ ರೂ. ಅನುದಾನ ಒದಗಿಸಲು ಸಂಪುಟ ನಿರ್ಧರಿಸಿದೆ. ಅಲ್ಲದೆ, ದೌರ್ಜನ್ಯಕ್ಕೊಳಗಾಗಿ ಮೃತಪಟ್ಟ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಕುಟುಂಬದ ಅವಲಂಬಿತರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ನೀಡಲು ಅನುಮೋದನೆ ನೀಡಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande