ಚಿತ್ರದುರ್ಗ, 18 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಸ್ವಚ್ಛತೆಯೇ ಸೇವೆ-ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ.ರಂಗಸ್ವಾಮಿ, ಯೋಜನಾ ನಿರ್ದೇಶಕರು ಹಾಗೂ ಮುಖ್ಯ ಯೋಜನಾಧಿಕಾರಿ ಸಿ.ಎಸ್.ಗಾಯಿತ್ರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಬಸನಗೌಡ ಪಾಟೀಲ್ ಅವರು, ಸ್ವಚ್ಛತಾ ಅಭಿಯಾನದ ಜಿಲ್ಲಾಮಟ್ಟದ ಕಾರ್ಯಕ್ರಮಕ್ಕೆ ಗಿಡ ನೆಡುವ ಮೂಲಕ ಚಾಲನೆ ನೀಡಿದರು. ನಂತರ ಸ್ವಚ್ಛತಾ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸಹಾಯಕ ಯೋಜನಾಧಿಕಾರಿ ಸುಮ, ಸ್ವಚ್ಛ ಭಾರತ್ ಮಿಷನ್ (ಗ್ರಾ) ಜಿಲ್ಲಾ ಸಮಾಲೋಚಕರಾದ ಬಿ.ಸಿ.ನಾಗರಾಜ್, ಪ್ರಮೀಳಾ, ವಿನಯ್ ಕುಮಾರ್, ಶಶಿಧರ್, ವಿಷಯ ನಿರ್ವಾಹಕರಾದ ಆನಂದ್, ನರೇಗಾ ಜಿಲ್ಲಾ ಸಮಾಲೋಚಕ ರವೀಂದ್ರ ನಾಥ್, ಎನ್‍ಆರ್‍ಎಲ್‍ಎಂ ಜಿಲ್ಲಾ ಸಮಾಲೋಚಕ ಯೋಗಿಶ್, ಜಲಜೀವನ್ ಮಿಷನ್ ಜಿಲ್ಲಾ ವ್ಯವಸ್ಥಾಪಕ ಮಂಜುನಾಥ ಎಸ್ ನಾಡರ್ ಸೇರಿದಂತೆ ಜಿಲ್ಲಾ ಪಂಚಾಯಿತಿ ವಿಭಾಗಗಳ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa