ನವದೆಹಲಿ, 18 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ವೋಟ್ ಚೋರಿ ಹೆಸರಿಟ್ಟು ಆರೋಪಿಸುವ ರಾಹುಲ್ ಗಾಂಧಿ ಕರ್ನಾಟಕದ ಮಾಲೂರು ವಿಧಾನ ಸಭಾ ಕ್ಷೇತ್ರದ ಬಗ್ಗೆ ಏಕೆ ಉಸಿರೊಡೆಯುವುದಿಲ್ಲ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಪ್ರಶ್ನಿಸಿದ್ದಾರೆ.
ವೋಟ್ ಚೋರಿ ಎಂಬುದು ರಾಹುಲ್ ಗಾಂಧಿ ಅವರ ಹೊಸ ಕಾಲ್ಪನಿಕ ಕಥೆಯೇ ಸರಿ ಎಂದಿರುವ ಜೋಶಿ, ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕತ್ವವನ್ನು ಹೈಕೋರ್ಟ್ ಅನರ್ಹಗೊಳಿಸಿದ್ದಲ್ಲದೆ ಮರು ಮತ ಎಣಿಕೆಗೆ ಆದೇಶಿಸಿದೆ. ವಾಸ್ತವ ಹೀಗಿರುವಾಗ ಈಗ್ಯಾರು ವೋಟ್ ಚೋರಿ ಎಂದು ಕಾಂಗ್ರೆಸ್‌ಗೆ ತಿರುಗೇಟು ನೀಡಿದ್ದಾರೆ.
ಕರ್ನಾಟಕದ ಮಾಲೂರು ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅತ್ಯಂತ ಕನಿಷ್ಠ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಇಲ್ಲಿಯ ಮತದಾನ, ಮತ ಎಣಿಕೆಯಲ್ಲಿ ಲೋಪದೋಷವಾಗಿದೆ. ಹೀಗಾಗಿ ಪರಾಜಿತ ಅಭ್ಯರ್ಥಿ ಹೈಕೋರ್ಟ್ ಮೆಟ್ಟಿಲೇರಿದ್ದು, ಪೂರಕ ದಾಖಲೆಗಳನ್ನು ಸಲ್ಲಿಸಿದ್ದರು. ಹೈಕೋರ್ಟ್ ಇದೀಗ ಕಾಂಗ್ರೆಸ್ ಅಭ್ಯರ್ಥಿಯ ಶಾಸಕತ್ವ ಅನರ್ಹಗೊಳಿಸಿ ಮರು ಮತ ಎಣಿಕೆಗೆ ಆದೇಶಿಸಿದೆ. ಈಗೇನು ಹೇಳುತ್ತಾರೆ ಈ ʼವೋಟ್ ಚೋರಿʼಯ ಕಥಾ ನಾಯಕರು ಎಂದು ಸಚಿವ ಪ್ರಲ್ಹಾದ ಜೋಶಿ ಪ್ರಶ್ನಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa