ಅಪಘಾತ ತಡೆಗೆ ಪರಿಣಾಮಕಾರಿ ರಸ್ತೆ ಸುರಕ್ಷತಾ ನಿಯಮಗಳ ಅನುಷ್ಠಾನಕ್ಕೆ ಡಿಸಿ ಸೂಚನೆ
ವಿಜಯಪುರ, 18 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲೆಯಲ್ಲಿ ರಾಜ್ಯ-ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಭವಿಸುವ ಅಪಘಾತಗಳನ್ನು ತಪ್ಪಿಸಲು ಪರಿಣಾಮಕಾರಿಯಾಗಿ ರಸ್ತೆ ಸುರಕ್ಷತಾ ನಿಯಮಗಳ ಪಾಲನೆಯಾಗುವಂತೆ ಹಾಗೂ ಅಪಘಾತ ತಡೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.
ಡಿಸಿ


ವಿಜಯಪುರ, 18 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲೆಯಲ್ಲಿ ರಾಜ್ಯ-ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಭವಿಸುವ ಅಪಘಾತಗಳನ್ನು ತಪ್ಪಿಸಲು ಪರಿಣಾಮಕಾರಿಯಾಗಿ ರಸ್ತೆ ಸುರಕ್ಷತಾ ನಿಯಮಗಳ ಪಾಲನೆಯಾಗುವಂತೆ ಹಾಗೂ ಅಪಘಾತ ತಡೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಮನಗೂಳಿ ಮತ್ತು ಉತ್ನಾಳ ಕ್ರಾಸ್‍ನಲ್ಲಿ ಅಪಘಾತಗಳು ಸಂಭವಿಸುವ ಹಿನ್ಜನಲೆಯಲ್ಲಿ ರಸ್ತೆ ಸುರಕ್ಷತಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈಗಾಗಲೇ ಮನಗೂಳಿ ಅಂಡರ್‍ಪಾಸ್ ಕಾಮಗಾರಿ ಕೈಗೊಳ್ಳಲು ಕ್ರೀಯಾ ಯೋಜನೆ ಸಿದ್ಧಪಡಿಸಲಾಗುತ್ತಿದ್ದು, ಯೋಜನಾ ವಿವರಗಳನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ನಾನಾ ಜಿಲ್ಲಾ ರಸ್ತೆ, ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ರಸ್ತೆಗಳಲ್ಲಿ ಅಪಘಾತ ಸಂಭವಿಸುವ ಸ್ಥಳಗಳಲ್ಲಿ ಸಂಬಂಧಿಸಿದ ಲೋಕೋಪಯೋಗಿ ಇಲಾಖೆ, ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಅಪಘಾತ ಸಂಭವಿಸುವ ಕಾರಣಗಳ ಕುರಿತು ಪರಿಶೀಲಿಸಿ ಪರಿಹಾರಕ್ಕೆ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

ಅಪಘಾತ ತಡೆಗಾಗಿ ರಸ್ತೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ವಾಹನ ಚಾಲಕರಿಗೆ ಸೂಕ್ತ ಜಾಗೃತಿ ಮೂಡಿಸಬೇಕು. ನಾನಾ ರಸ್ತೆಗಳಲ್ಲಿ ಚಾಲಕರ ಜಾಗೃತಿಗಾಗಿ ಸೈನ್‍ಬೋರ್ಡ, ಹಂಪ್ಸ್, ರಸ್ತೆ ತಿರುವಿನಲ್ಲಿ ಮಾಹಿತಿ ಫಲಕಗಳ ಅಳವಡಿಕೆ ಸೇರಿದಂತೆ ರಸ್ತೆ ಸುರಕ್ಷತೆಗೆ ಕ್ರಮ ಕೈಗೊಂಡು ಸುರಕ್ಷತಾ ನಿಯಮಗಳು ಪಾಲನೆಯಾಗುವಂತೆ ನೋಡಿಕೊಳ್ಳಬೇಕು. ಜಿಲ್ಲೆಯ ಕನ್ನೊಳ್ಳಿ, ಹಿಟ್ನಳ್ಳಿ, ಮುಳವಾಡ, ತಿಡಗುಂದಿ ಸೇರಿದಂತೆ ವಿವಿಧ ಟೋಲ್‍ಗಳಲ್ಲಿ ಸಿಸಿಟಿವಿ ಅಳವಡಿಸಬೇಕು. ಅವಶ್ಯಕತೆವಿದ್ದೆಡೆ ಬ್ಲಿಂಕರ್‍ಗಳನ್ನು ಅಳವಡಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಅಪಘಾತಗಳನ್ನು ತಪ್ಪಿಸಲು ಕೈಗೊಂಡ ಕ್ರಮಗಳ ಕುರಿತಾಗಿ ಮಾಹಿತಿ ನೀಡಲಾಯಿತು.

ಸಭೆಯಲ್ಲಿ ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಇಂಡಿ ಉಪವಿಭಾಗಾಧಿಕಾರಿ ಶ್ರೀಮತಿ ಅನುರಾಧಾ ವಸ್ತ್ರದ, ಡಿವೈಎಸ್‍ಪಿ ಬಸವರಾಜ ಯಲಿಗಾರ, ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಂ ಬಾಬಾ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ವೀರಯ್ಯ ಸಾಲಿಮಠ ಸೇರಿದಂತೆ ಹಲವಾರು ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande