ಸಿಐಡಿಗೆ ಮಾಹಿತಿ ನೀಡದ ಚುನಾವಣಾ ಆಯೋಗ : ಸಿದ್ದರಾಮಯ್ಯ
ಬೆಂಗಳೂರು, 18 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : 2022ರ ಫೆಬ್ರವರಿಯಿಂದ 2023ರ ಫೆಬ್ರವರಿ ವರೆಗೆ ಕಲಬುರಗಿ ಜಿಲ್ಲೆಯ ಆಳಂದ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ಅಪ್ಲಿಕೇಷನ್‌ ಮೂಲಕ ಫಾರ್ಮ್‌ 7ರ ಅಡಿ ಮತದಾರರ ಹೆಸರುಗಳನ್ನು ಅಳಿಸಿಹಾಕುವಂತೆ ಒಟ್ಟು 6,018 ಅರ್ಜಿಗಳು ಸಲ್ಲಿಕೆಯಾಗಿದ್ದವು.
Cm


ಬೆಂಗಳೂರು, 18 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : 2022ರ ಫೆಬ್ರವರಿಯಿಂದ 2023ರ ಫೆಬ್ರವರಿ ವರೆಗೆ ಕಲಬುರಗಿ ಜಿಲ್ಲೆಯ ಆಳಂದ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ಅಪ್ಲಿಕೇಷನ್‌ ಮೂಲಕ ಫಾರ್ಮ್‌ 7ರ ಅಡಿ ಮತದಾರರ ಹೆಸರುಗಳನ್ನು ಅಳಿಸಿಹಾಕುವಂತೆ ಒಟ್ಟು 6,018 ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಪೈಕಿ ಕೇವಲ 24 ಅರ್ಜಿಗಳು ಅಸಲಿಯಾಗಿದ್ದು, ಉಳಿದ 5,994 ಅರ್ಜಿಗಳು ನಕಲಿ ಎಂಬುದು ತನಿಖೆಯ ಮೂಲಕ ತಿಳಿದುಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಮತದಾರರ ಮಾಹಿತಿ ಕಳವು, ನಕಲಿ ಲಾಗಿನ್‌ ಗಳು ಹಾಗೂ ಹೊರರಾಜ್ಯದ ಮೊಬೈಲ್‌ ಸಂಖ್ಯೆಗಳ ಮೂಲಕ ಬೇನಾಮಿ ಅರ್ಜಿಗಳ ಸಲ್ಲಿಕೆ ಮಾಡಲಾಗಿದೆ. ಕುಟುಂಬವೊಂದರ ಅರಿವಿಗೆ ಬಾರದೆಯೇ ಇಡೀ ಕುಟುಂಬದ ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡುವಂತೆ ಅರ್ಜಿ ಸಲ್ಲಿಕೆಯಾಗಿತ್ತು. ಈ ಬಗ್ಗೆ ದೂರು ದಾಖಲಾಗಿದ್ದು, ಸಿಐಡಿ ತನಿಖೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಭಾಗಿಯಾದವರು ಯಾರು ಮತ್ತು ಯಾವ ಸ್ಥಳದಿಂದ ಈ ಎಲ್ಲಾ ಕೃತ್ಯಗಳು ನಡೆದಿದ್ದವು ಎಂದು ಪತ್ತೆಹಚ್ಚಲು ಟೆಕ್ನಿಕಲ್‌ ಮಾಹಿತಿಗಳಾದ ಐಪಿ ಅಡ್ರೆಸ್‌, ಬಳಕೆಯಾದ ಡಿವೈಸ್‌ ಗಳು ಮತ್ತು ಒಟಿಪಿ ಪಡೆದವರ ವಿವರಗಳನ್ನು ಕಳೆದ 18 ತಿಂಗಳಗಳಿಂದ ರಾಜ್ಯದ ಸಿಐಡಿ ತನಿಖಾ ಸಂಸ್ಥೆಯವರು ನಿರಂತರವಾಗಿ ಚುನಾವಣಾ ಆಯೋಗದ ಬಳಿ ಕೇಳುತ್ತಿದ್ದಾರೆ. ಆದರೆ ಚುನಾವಣಾ ಆಯೋಗವು ಈ ಮಾಹಿತಿಯನ್ನು ಒದಗಿಸಲು ನಿರಾಕರಿಸುತ್ತಾ ಬಂದಿದೆ. ಇಂದು ಚುನಾವಣಾ ಆಯೋಗವು ಈ ಬೇಡಿಕೆಗಳಿಗೆ ಸೂಕ್ತ ಮಾಹಿತಿಯನ್ನು ಒದಗಿಸಿ ಸ್ಪಂದಿಸುವ ಬದಲು ನಿರ್ಧಿಷ್ಟ ಪ್ರಕ್ರಿಯೆಗೊಳಪಡದೆ ಮತದಾರರ ಪಟ್ಟಿಯಿಂದ ಹೆಸರನ್ನು ಕೈಬಿಡುವುದು ಅಸಾಧ್ಯವೆಂದು ಹೇಳಿ ಈ ಎಲ್ಲಾ ಆರೋಪಗಳನ್ನು “ಆಧಾರ ರಹಿತ ಮತ್ತು ಅಸತ್ಯ” ಎಂದು ತಳ್ಳಿಹಾಕಿದೆ. ಸಿಐಡಿ ಕಡೆಯಿಂದ 18 ನಿರಂತರ ಮನವಿಗಳ ಹೊರತಾಗಿಯೂ ಚುನಾವಣಾ ಆಯೋಗ ಡಿಜಿಟಲ್‌ ಸಾಕ್ಷ್ಯಗಳನ್ನು ನೀಡದಿರಲು ಕಾರಣವೇನು ಎಂಬ ಪ್ರಶ್ನೆ ಮಾತ್ರ ಪ್ರಶ್ನೆಯಾಗಿಯೇ ಉಳಿದಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande