ಸ್ವಸ್ತ ನಾರಿ, ಸಶಕ್ತ ಪರಿವಾರ ಅಭಿಯಾನ
ವಿಜಯಪುರ, 18 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ವಿಜಯಪುರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರ, ಮತ್ತು ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ವಿಭಾಗದ ಉಕ್ಕಲಿ ಗ್ರಾಮೀಣ ಆರೋಗ್ಯ ತರಬೇತಿ ಕೇಂದ್ರದ ಸಂಯುಕ್
ನಾರಿ


ವಿಜಯಪುರ, 18 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ವಿಜಯಪುರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರ, ಮತ್ತು ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ವಿಭಾಗದ ಉಕ್ಕಲಿ ಗ್ರಾಮೀಣ ಆರೋಗ್ಯ ತರಬೇತಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಬಸವನ ಬಾಗೇವಾಡಿ ತಾಲೂಕಿನ ದೇಗಿನಾಳ ಗ್ರಾಮದಲ್ಲಿ ಸ್ವಸ್ತ ನಾರಿ, ಸಶಕ್ತ ಪರಿವಾರ ಅಭಿಯಾನ ನಡೆಯಿತು.

ಈ‌ ಅಭಿಯಾನದ ಅಂಗವಾಗಿ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಮಸಬಿನಾಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶರಣು ಪಡಸಲಗಿ ಉದ್ಘಾಟಿಸಿದರು.

ಆಸ್ಪತ್ರೆಯ ಸಹಾಯಕ ವೈದ್ಯಕೀಯ ಅಧೀಕ್ಷಕ ಡಾ. ರವಿಕುಮಾರ ಬಿರಾದಾರ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯೆ ಡಾ. ತೇಜಸ್ವಿನಿ ವಲ್ಲಬ, ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥೆ ಡಾ. ರೇಖಾ ಉದಿಗಿರಿ, ಉನ್ನತ ಭಾರತ ಅಭಿಯಾನ ಸಂಯೋಜಕ ಡಾ. ಪ್ರವೀಣ ಗಂಗನಳ್ಳಿ, ಅಂಜುಮನ್ ಕಮಿಟಿ ಅಧ್ಯಕ್ಷ ಮೌಲಾಸಾಬ್ ದಖನಿ, ಗ್ರಾ. ಪಂ. ಸದಸ್ಯರಾದ ದ್ಯಾವುಗೌಡ ಪಾಟೀಲ, ಮುಖಂಡ ಸಂಜೀವ ಖಾನಗೌಡ್ರ ಮುಂತಾದವರು ಉಪಸ್ಥಿತರಿದ್ದರು.

ಈ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ವೈದ್ಯಕೀಯ ವಿಭಾಗ, ಮಹಿಳೆಯರ ವಿಭಾಗ, ಚಿಕ್ಕ ಮಕ್ಕಳ ವಿಭಾಗ, ದಂತ ವಿಭಾಗ, ಚರ್ಮ ವಿಭಾಗ, ಎಲುಬು ಮತ್ತು ಕೀಲು ವಿಭಾಗ, ವೈದ್ಯರು ಉಪಸ್ಥಿತರಿದ್ದ ರೋಗಿಗಳ ಆರೋಗ್ಯ ತಪಾಸಣೆ ನಡೆಸಿ ಉಚಿತವಾಗಿ ಔಷಧಿ ವಿತರಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande