ವಿಜಯಪುರ, 18 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ವಿಜಯಪುರ ಬಿ.ಎಲ್.ಡಿ.ಇ ಆಸ್ಪತ್ರೆ ಬಡವರು ಮತ್ತು ಮಹಿಳೆಯರಿಗೆ ಗುಣಮಟ್ಟದ ಸೇವೆ ನೀಡುವಲ್ಲಿ ಮುಂಚೂಣಿಯಲ್ಲಿದೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿ ಬಸನಗೌಡ ಎಂ. ಪಾಟೀಲ ಹೇಳಿದ್ದಾರೆ.
ನಗರದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿವಿಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನದ ಅಡಿಯಲ್ಲಿ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಗರ್ಭಿಣಿ ಮಹಿಳೆಯರಿಗೆ ಉಚಿತವಾಗಿ ಹೆರಿಗೆ ಸೌಲಭ್ಯ ಒದಗಿಸಲಾಗಿದೆ. ಇದೇ ರೀತಿ ಬಡವರು ಮತ್ತು ಮಹಿಳೆಯರಿಗಾಗಿ ಅನೇಕ ಕಾರ್ಯಕ್ರಮಗಳನ್ನು ಜಾರಿ ಮಾಡುವ ಮೂಲಕ ಸರ್ವರಿಗೂ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಕಾರ್ಯ ನಿರಂತರವಾಗಿ ಸಾಗಿದೆ ಎಂದು ಅವರು ಹೇಳಿದರು.
ಇಂಥ ಅಭಿಯಾನಗಳಿಂದ ಸೌಲಭ್ಯ ವಂಚಿತ ಸಮುದಾಯಗಳಲ್ಲಿನ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಹಾಗೂ ಸದೃಢ ಆರೋಗ್ಯದ ಕುರಿತು ಜಾಗೃತಿ ಮೂಡಿಸಲು ಅನುಕೂಲವಾಗುತ್ತದೆ ಎಂದು ಅವರು ಹೇಳಿದರು.
ಈ ಶಿಬಿರದಲ್ಲಿ ಸುಮಾರು 150 ಕ್ಕೂ ಹೆಚ್ಚು ಮಹಿಳೆಯರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಅವರದಲ್ಲಿ ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದಲ್ಲಿ 33, ವೈದ್ಯಕೀಯ ಚಿಕಿತ್ಸೆ ವಿಭಾಗದಲ್ಲಿ 50, ಶಸ್ತ್ರಚಿಕಿತ್ಸೆ ವಿಭಾಗದಲ್ಲಿ 67 ಮಹಿಳೆಯರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.
ಈ ಸಂದರ್ಭದಲ್ಲಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಹಂಗಾಮಿ ಕುಲಪತಿ ಡಾ. ಅರುಣ ಚಂ. ಇನಾಮದಾರ, ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ, ವೈದ್ಯಕೀಯ ಅಧೀಕ್ಷಕ ಡಾ. ಆರ್. ಎಂ. ಹೊನ್ನುಟಗಿ, ಪ್ರಾಧ್ಯಾಪಕಿ ಡಾ.ವಿಜಯಾ ಪಾಟೀಲ, ಸಹಪ್ರಾಧ್ಯಾಪಕಿ ಡಾ. ಅನುಜಾ ಕುಡಗೋಡ, ಪ್ರಾಧ್ಯಾಪಕರಾದ ಡಾ. ವಿಜಯಕುಮಾರ ಜಿ. ವಾರದ, ಡಾ. ಆನಂದ ಅಂಬಲಿ, ಡಾ.ಶ್ರೀದೇವಿ ಕೋರಿ, ಡಾ. ನೀಲಮ್ಮ ಪಾಟೀಲ, ಡಾ.ರೂಪಾ ಶಹಾಪುರ, ವೈದ್ಯಕೀಯ ಸ್ನಾತಕೋತರ ವಿದ್ಯಾರ್ಥಿಗಳು, ಆರೋಗ್ಯ ಸೇವೆ ಕಾರ್ಯಕರ್ತರು ಉಪಸಿದ್ಧರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande