ಚಿತ್ರದುರ್ಗ, 18 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಚಿತ್ರದುರ್ಗ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆ ಘಟಕದ ವತಿಯಿಂದ “ಯುವಜನೋತ್ಸವ”ದ ಅಂಗವಾಗಿ ಕಾಲೇಜು ವಿದ್ಯಾರ್ಥಿಗಳಿಗೆ ಇದೇ ಸೆಪ್ಟೆಂಬರ್ 24ರಂದು ಬೆಳಿಗ್ಗೆ 6.30ಕ್ಕೆ 5 ಕಿ.ಮೀ ಮ್ಯಾರಥಾನ್ ಸ್ಪರ್ಧೆ ಏರ್ಪಡಿಸಲಾಗಿದೆ.
ಮ್ಯಾರಥಾನ್ ಸ್ಪರ್ಧೆಯು ಕನಕ ವೃತ್ತ, ಮುಖ್ಯವೃತ್ತ, ಪ್ರವಾಸಿ ಮಂದಿರ, ಆಸ್ಪತ್ರೆ ವೃತ್ತ ಮಾರ್ಗವಾಗಿ ಒನಕೆ ಓಬವ್ವ ಸ್ಟೇಡಿಯಂ ತಲುಪಲಿದೆ ಎಂದು ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa