ನವದೆಹಲಿ, 18 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ನೇಪಾಳದ ಮಧ್ಯಂತರ ಪ್ರಧಾನಿ ಸುಶೀಲಾ ಕರ್ಕಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದರು.
ಇತ್ತೀಚಿನ ಪ್ರತಿಭಟನೆಯಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ನೇಪಾಳದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ತರುವ ಪ್ರಯತ್ನಗಳಿಗೆ ಭಾರತದ ಪೂರ್ಣ ಬೆಂಬಲವಿದೆ ಎಂದು ಭರವಸೆ ನೀಡಿದರು.
ಅವರು ನಾಳೆ ನಡೆಯುವ ನೇಪಾಳದ ರಾಷ್ಟ್ರೀಯ ದಿನದಂದು ಪ್ರಧಾನಿ ಕರ್ಕಿ ಹಾಗೂ ನೇಪಾಳದ ಜನತೆಗೆ ಶುಭಾಶಯಗಳನ್ನು ತಿಳಿಸಿದರು. “ಶಾಂತಿ ಮತ್ತು ಸ್ಥಿರತೆಯನ್ನು ಪುನಃಸ್ಥಾಪಿಸುವ ಅವರ ಪ್ರಯತ್ನಗಳಿಗೆ ಭಾರತವು ಸದಾ ಬೆಂಬಲ ನೀಡಲಿದೆ” ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa