ಬೆಂಗಳೂರು, 18 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಬುಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ ವಿಚಾರ ಇದೀಗ ಸರ್ವೋಚ್ಚ ನ್ಯಾಯಾಲಯದ ಅಂಗಳ ತಲುಪಿದೆ.
ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಹೆಚ್.ಎಸ್. ಗೌರವ್ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದಾರೆ. ಸೆಪ್ಟೆಂಬರ್ 22ರಂದು ದಸರಾ ಉದ್ಘಾಟನೆ ನಡೆಯಲಿರುವುದರಿಂದ ತುರ್ತು ವಿಚಾರಣೆ ನಡೆಸಬೇಕು ಎಂದು ಅವರು ಮುಖ್ಯ ನ್ಯಾಯಮೂರ್ತಿ ಗವಾಯಿ ಮುಂದೆ ಮನವಿ ಸಲ್ಲಿಸಿದರು. ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ, ಈ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸುವುದಾಗಿ ತಿಳಿಸಿದೆ.
ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಈ ಹಿಂದೆ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಮೂವರು ಸಲ್ಲಿಸಿದ್ದ ಅರ್ಜಿಗಳನ್ನು ಸೆಪ್ಟೆಂಬರ್ 15ರಂದು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿ ವಜಾಗೊಳಿಸಿತ್ತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa