ಪಂಜಾಬ್ ಪ್ರವಾಹ : ಸಮಗ್ರ ಪರಿಹಾರ ಪ್ಯಾಕೇಜ್ ನೀಡುವಂತೆ ರಾಹುಲ್ ಗಾಂಧಿ ಒತ್ತಾಯ
ನವದೆಹಲಿ, 18 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಪಂಜಾಬ್ ಪ್ರವಾಹದಿಂದ ಉಂಟಾದ ಹಾನಿ ಹಿನ್ನೆಲೆಯಲ್ಲಿ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಘೋಷಿಸಲಾದ ₹1,600 ಕೋಟಿ ಆರಂಭಿಕ ಪರಿಹಾರ ಮೊತ್ತ ಸಾಕಾಗುವುದಿಲ್ಲ ಎಂದು ತಿಳಿಸಿದ್ದಾರೆ. ಪ್ರವಾಹದಿಂದ 4
ಪಂಜಾಬ್ ಪ್ರವಾಹ : ಸಮಗ್ರ ಪರಿಹಾರ ಪ್ಯಾಕೇಜ್ ನೀಡುವಂತೆ ರಾಹುಲ್ ಗಾಂಧಿ ಒತ್ತಾಯ


ನವದೆಹಲಿ, 18 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಪಂಜಾಬ್ ಪ್ರವಾಹದಿಂದ ಉಂಟಾದ ಹಾನಿ ಹಿನ್ನೆಲೆಯಲ್ಲಿ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಘೋಷಿಸಲಾದ ₹1,600 ಕೋಟಿ ಆರಂಭಿಕ ಪರಿಹಾರ ಮೊತ್ತ ಸಾಕಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಪ್ರವಾಹದಿಂದ 4 ಲಕ್ಷ ಎಕರೆ ಭತ್ತದ ಬೆಳೆ ನಾಶವಾಗಿದ್ದು, 10 ಲಕ್ಷಕ್ಕೂ ಹೆಚ್ಚು ಪಶುಗಳು ಮೃತಪಟ್ಟಿವೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದು, ಹಳ್ಳಿಗಳು ಸಂಪರ್ಕದಿಂದ ದೂರವಾಗಿವೆ. ಹಾನಿ ಕನಿಷ್ಠ ₹20,000 ಕೋಟಿಯಷ್ಟಿದೆ ಎಂದು ಅವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ತ್ವರಿತ ಮೌಲ್ಯಮಾಪನ ನಡೆಸಿ, ಸಮಗ್ರ ಪರಿಹಾರ ಪ್ಯಾಕೇಜ್ ಘೋಷಿಸಬೇಕೆಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande