ಕೋಲಾರ, 18 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಮಹಿಳೆಯರ ಆರೋಗ್ಯ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಕೈಗೊಂಡಿರುವ ಸ್ವಸ್ಥ ನಾರಿ-ಸಶಕ್ತ ಪರಿವಾರ್ ಅಭಿಯಾನ ಶ್ಲಾಘನೀಯವಾಗಿದೆ. ಈ ಯೋಜನೆಯ ಮೂಲಕ ಬಿ.ಪಿ.ಮಧುಮೇಹ, ಕ್ಯಾನ್ಸರ್ ಮುಂತಾದ ರೋಗಗಳನ್ನು ಮುಂಚಿತವಾಗಿ ಪತ್ತೆ ಹಚ್ಚಿ ತಕ್ಷಣ ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತದೆ. ಇದರಿಂದ ಬಡಕುಟುಂಬಗಳು ಆರ್ಥಿಕ ಸಂಕಷ್ಟದಿಂದ ಹಾಗೂ ಮಹಿಳೆಯರು ಅನಾರೋಗ್ಯದ ಹಿಂಸೆಗಳಿಂದ ಪಾರಾಗಲು ನೆರವಾಗುತ್ತದೆ ಎಂದು ಸಂಸದರಾದ ಎಂ. ಮಲ್ಲೇಶ್ ಬಾಬು ತಿಳಿಸಿದರು.
ಕೋಲಾರ ಜಿಲ್ಲಾ ಎಸ್.ಎನ್.ಆರ್. ಆಸ್ಪತ್ರೆಯಲ್ಲಿ ಚಾಲನೆಯನ್ನು ನೀಡಿದರು. ಮಹಿಳೆಯರು ಪ್ರತಿ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದಾರೆ, ಸಮ ಸಮಾಜ ನಿರ್ಮಾಣದಲ್ಲಿ ಮಹಿಳೆಯರು ಭಾಗವಹಿಸುವಿಕೆ ಹೆಚ್ಚಾಗುತ್ತಿದೆ. ಜಾಗತಿಕ ಮಟ್ಟದಲ್ಲಿ ಪೈಪೋಟಿ ನೀಡಿ ಹಲವು ಉನ್ನತ ಹುದ್ದೆಗಳನ್ನು ಮಹಿಳೆಯರು ಪಡೆಯುತ್ತಿದ್ದಾರೆ. ಒಂದು ಕುಟುಂಬದ ಸಂಪೂರ್ಣ ಜವಾಬ್ದಾರಿಯನ್ನು ಹೊತ್ತು ಮುನ್ನಡೆಸಬಲ್ಲ ಯುಕ್ತಿ ಸ್ತ್ರೀಯರಲ್ಲಿದೆ. ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿನ ಮಹಿಳೆಯರಿಗೆ ಸಮರ್ಪಕ ಆರೋಗ್ಯ ತಪಾಸಣೆ ಮಾಡುವ ಮೂಲಕ ಗಂಭೀರ ರೋಗಗಳನ್ನು ಮುಂಚಿತವಾಗಿ ನಿಯಂತ್ರಣಕ್ಕೆ ತರಲು ಅನುಕೂಲವಾಗಲಿದೆ ಎಂದು ಜನರಿಗೆ ಉತ್ತಮ ಆರೋಗ್ಯ ಕಲ್ಪಿಸಲು ಅಧಿಕಾರಿಗಳು, ಸಿಬ್ಬಂದಿ ವರ್ಗ ಆಶಾ ಕಾರ್ಯಕರ್ತರು ಸಮರ್ಪಕವಾಗಿ ಶ್ರಮೀಸಬೇಕೆಂದು ಶ್ರೀಮತಿ ಲಕ್ಷ್ಮೀದೇವಮ್ಮ, ನಗರ ಸಭೆ ಅಧ್ಯಕ್ಷರು, ತಿಳಿಸಿದರು.
ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು, ಮಹಿಳೆಯರಲ್ಲಿ ಅತಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಸ್ತನ ಕ್ಯಾನ್ಸರ್, ಅನಿಮೀಯಾದಂತರ ರೋಗಗಳ ಬಗ್ಗೆ ಎಚ್ಚರ ವಹಿಸಬೇಕು. ಇದರ ಗುಣಲಕ್ಷಣಗಳು ಕಂಡು ಬಂದಲ್ಲಿ ಶೀಘ್ರವಾಗಿ ಚಿಕಿತ್ಸೆ ಪಡೆದುಕೊಂಡಲ್ಲಿ ಇವುಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ. ಅದಕ್ಕಾಗಿಯೇ ಸ್ವಸ್ಥ ನಾರಿ ಸಶಕ್ತ ಪರಿಹಾರ ಎಂಬ ಅಭಿಯಾನದಲ್ಲಿ ಆರೋಗ್ಯವಂತ ಮಹಿಳೆಯರು ಸದೃಢ ಕುಟುಂಬಗಳು ಉಚಿತ ಆರೋಗ್ಯ ತಪಾಸಣೆ, ಕ್ಯಾನ್ಸರ್ ಸ್ಟೀನಿಂಗ್, ಪ್ರಸವಪೂರ್ವ ಆರೈಕೆ, ಲಸಿಕೆಗಳು ಪ್ರತಿಯೊಬ್ಬ ಮಹಿಳೆಯರು ತಪಾಸಣೆ ಮಾಡಿಕೊಳ್ಳಬೇಕು. ಈ ಅಭಿಯಾನದ ಪ್ರಯೋಜನ ಪಡೆಯಲು ನಿಮ್ಮ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರ, ಆಯುಷ್ಮಾನ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ ಅಥವಾ ಅಂಗನವಾಡಿ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕರು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾನ್ಯ ಲೋಕಸಭಾ ಸದಸ್ಯರು ಮಲ್ಲೇಶ್ ಬಾಬು, ಶ್ರೀಮತಿ ಲಕ್ಷ್ಮೀದೇವಮ್ಮ ನಗರ ಸಭೆ ಅಧ್ಯಕ್ಷರು, ಕೋಲಾರ, ಡಾ|| ಜಿ. ಶ್ರೀನಿವಾಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಡಾ|| ಎಂ. ಜಗದೀಶ್, ಜಿಲ್ಲಾ ಶಸ್ತ್ರಚಿಕಿತ್ಸಕರು, ಡಾ|| ಎಂ.ಎ. ಚಾರಿಣಿ, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿಗಳು, ಡಾ|| ಬಿ.ಹೆಚ್. ರವಿಕುಮಾರ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳು, ಡಾ|| ಜಿ. ಪ್ರಸನ್ನಕುಮಾರ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳು, ಡಾ|| ಸುಧಾಮಣಿ, ವೈದ್ಯಕೀಯ ಅಧೀಕ್ಷಕರು, ಡಾ|| ಎ.ವಿ. ನಾರಾಯಣಸ್ವಾಮಿ, ತಾಲ್ಲೂಕು ಆರೋಗ್ಯಾಧಿಕಾರಿಗಳು ಕೋಲಾರ ಶ್ರೀಮತಿ ಎಂ.ಪ್ರೇಮ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಚಿತ್ರ : ಕೋಲಾರ ಜಿಲ್ಲಾ ಎಸ್.ಎನ್.ಆರ್. ಆಸ್ಪತ್ರೆಯಲ್ಲಿ ಸ್ವಸ್ಥನಾರಿ, ಸಶಕ್ತ ಪರಿವಾರ ಅಭಿಯಾನಕ್ಕೆ ಸಂಸದರಾದ ಎಂ. ಮಲ್ಲೇಶ್ ಬಾಬು ಚಾಲನೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್