ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಆಂದೋಲನ
ಹಾಸನ, 18 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸಲು ಪ್ರತಿ ವರ್ಷ ಅಕ್ಟೋಬರ್ 2 ರಂದು ಸ್ವಚ್ಚ ಭಾರತ ದಿನವನ್ನಾಗಿ ಆಚರಿಸುತ್ತಿದ್ದು ಸ್ವಚ್ಛತೆಗಾಗಿ ಸ್ವಯಂ ಪ್ರೇರಣೆ ಮತ್ತು ಸಾಮೂಹಿಕ ಶ್ರಮದಾನ ಚಟುವಟಿಕೆಗಳನ್ನು ಹಮ್ಮಿಕೊಂಡು ಸಮುದಾಯದಲ್
ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಆಂದೋಲನ


ಹಾಸನ, 18 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸಲು ಪ್ರತಿ ವರ್ಷ ಅಕ್ಟೋಬರ್ 2 ರಂದು ಸ್ವಚ್ಚ ಭಾರತ ದಿನವನ್ನಾಗಿ ಆಚರಿಸುತ್ತಿದ್ದು ಸ್ವಚ್ಛತೆಗಾಗಿ ಸ್ವಯಂ ಪ್ರೇರಣೆ ಮತ್ತು ಸಾಮೂಹಿಕ ಶ್ರಮದಾನ ಚಟುವಟಿಕೆಗಳನ್ನು ಹಮ್ಮಿಕೊಂಡು ಸಮುದಾಯದಲ್ಲಿ ಸ್ವಚ್ಛತೆಯ ಆಶಯಗಳನ್ನು ಬಲಪಡಿಸಲು 2017 ರಿಂದ ಈ ಸ್ವಚ್ಛತಾ ಹೀ ಸೇವಾ (SHS-2025) ಪಾಕ್ಷಿಕ ಆಂದೋಲನವನ್ನು ಆಚರಿಸಲಾಗುತ್ತಿದೆ.

ಸ್ವಚ್ಛ ಭಾರತ ಅಭಿಯಾನದ 11ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ ಈ ಯೋಜನೆಯ ಸಾಧನೆಯ ಮೈಲಿಗಲ್ಲನ್ನು ಗೌರವಿಸಲು, ಸ್ವಚ್ಛತಾ ಹೀ ಸೇವಾ ಪಾಕ್ಷಿಕ-2025 ಅಭಿಯಾನವನ್ನು ಅಕ್ಟೋಬರ್ 2 ರವರೆಗೆ ಈ ಅಭಿಯಾನವನ್ನು ಅಚರಿಸಲಾಗುತ್ತಿದೆ.

ಅಭಿಯಾನದ ಅವಧಿಯಲ್ಲಿ ಸ್ವಚ್ಛತೆಗಾಗಿ ಬೃಹತ್ ಪ್ರಮಾಣದಲ್ಲಿ ಸಾರ್ವಜನಿಕರ ಸಹಭಾಗಿತ್ವ ಮತ್ತು ಸಮುದಾಯದ ಭಾಗವಹಿಸುವಿಕೆಗೆ ಅನುಕೂಲ ಮಾಡಿಕೊಡುತ್ತದೆ, ಅನೈರ್ಮಲ್ಯ ಮತ್ತು ಸಮಸ್ಯಾತ್ಮಕ ಕಸದ ತಾಣಗಳನ್ನು ತೆರವುಗೊಳಿಸುವತ್ತ ಗಮನಹರಿಸುವ ಬೃಹತ್ ಸ್ವಚ್ಛತಾ ಅಭಿಯಾನಗಳು, ನೈರ್ಮಲ್ಯ ಕಾರ್ಮಿಕರ ಕೊಡುಗೆಯನ್ನು ಗುರುತಿಸುವುದು. ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಈ ಕೆಳಕಂಡ ಕಾರ್ಯಕ್ರಮಗಳನ್ನು ರೂಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಸೆ.25 ರಂದು ಒಂದು ದಿನ, ಒಂದು ಗಂಟೆ, ಎಲ್ಲರೂ ಒಟ್ಟಿಗೆ ಶ್ರಮದಾನ ಕಾರ್ಯಕ್ರಮ. ಗ್ರಾಮ ಪಂಚಾಯಿತಿಗಳಲ್ಲಿ ಹಿಂದಿನ ವರ್ಷಗಳಂತೆ, ಜನರು ಸ್ವಯಂ ಪ್ರೇರಿತರಾಗಿ ಒಂದು ದಿನ, ಒಂದು ಗಂಟೆ, ಎಲ್ಲರೂ ಒಟ್ಟಿಗೆ ಶ್ರಮದಾನ (ಏಕ್ ದಿನ್, ಏಕ್ ಘಂಟಾ, ಎಕ್ ಸಾಥ್) ಎಂಬ ಘೋಷ ವಾಕ್ಯದಡಿ ಸೆ.25 ರಂದು ಸಾಮೂಹಿಕ ಶ್ರಮದಾನವನ್ನು ಏಕಕಾಲದಲ್ಲಿ ಹಮ್ಮಿಕೊಳ್ಳಲಾಗಿದೆ.

ಪರಿಸರ ಸ್ನೇಹಿ ಹಬ್ಬಗಳ ಆಚರಣೆಗಾಗಿ ಸ್ಥಳೀಯ ಸಂಘಟನೆಗಳೊAದಿಗೆ GPLF, SHG, ಹಾಗೂ ಸಮುದಾಯ ಆಧಾರಿತ ಸಂಘಟನೆಗಳನ್ನು ತೊಡಗಿಸಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ ಎಂದ ಹಾಸನ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande