ಬೆಂಗಳೂರು, 18 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಆರಂಭವಾದ ಎರಡು ದಿನಗಳ ಬಿಜೆಪಿ ರಾಜಕೀಯ ಚಿಂತನ ಶಿಬಿರದಲ್ಲಿ ಪ್ರಸ್ತುತ ರಾಜಕೀಯ ಪರಿಸ್ಥಿತಿ, ಸವಾಲುಗಳು ಹಾಗೂ ಪರಿಹಾರಗಳ ಕುರಿತಂತೆ ಚರ್ಚೆಗಳು ನಡೆಯಲಿವೆ. ಪಕ್ಷದ ಸಂವಿಧಾನ, ರಾಜ್ಯ–ರಾಷ್ಟ್ರದ ಸಮಸ್ಯೆಗಳು ಹಾಗೂ ಪರಿಹಾರ ಮಾರ್ಗಗಳ ಕುರಿತು ತಜ್ಞರು ಮಾರ್ಗದರ್ಶನ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ, ಬಿ.ಎಸ್. ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ವಿ. ಸೋಮಣ್ಣ, ರಾಜ್ಯ ಉಸ್ತುವಾರಿಗಳಾದ ರವೀಂದ್ರ ಅಗ್ರವಾಲ್, ವಿಧಾನ ಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ಸೇರಿದಂತೆ ಪಕ್ಷದ ಶಾಸಕರು, ಸಂಸದರು ಹಾಗೂ ಪ್ರಮುಖರು ಉಪಸ್ಥಿತರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa