ಬೆಂಗಳೂರು, 18 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಬಿಜೆಪಿ ಪಕ್ಷದ ಶಾಸಕರು, ಸಂಸದರು ಮತ್ತು ಪ್ರಮುಖರು ಭಾಗಿಯಾಗಲಿರುವ ಎರಡು ದಿನಗಳ ಚಿಂತನಾ ಶಿಬಿರವನ್ನು ಉದ್ಘಾಟಿಸಲು ಬೆಂಗಳೂರಿಗೆ ಆಗಮಿಸಿದ ಪಕ್ಷದ ಹಿರಿಯ ನಾಯಕರಾದ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆತ್ಮೀಯ ಸ್ವಾಗತ ಕೋರಿದರು.
ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಬಸವರಾಜ ಮತ್ತಿಮೂಡ್ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa