ಹುಬ್ಬಳ್ಳಿ, 18 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ರಾಜ್ಯ ಸರ್ಕಾರದ ಸಾಮಾಜಿಕ–ಶೈಕ್ಷಣಿಕ ಸಮೀಕ್ಷೆ ಹಿನ್ನೆಲೆಯಲ್ಲಿ ನಾಳೆ ಹುಬ್ಬಳ್ಳಿಯಲ್ಲಿ ವೀರಶೈವ–ಲಿಂಗಾಯತ ಏಕತಾ ಸಮಾವೇಶ ನಡೆಯಲಿದೆ.
ನಗರದ ನೆಹರೂ ಮೈದಾನದಲ್ಲಿ ವೀರಶೈವ–ಲಿಂಗಾಯತ ಏಕತಾ ಸಮಾವೇಶ ಆಯೋಜಿಸಲಾಗಿದ್ದು, ಶಿರಹಟ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ನಾಳೆ ನಡೆಯುವ ಏಕತಾ ಸಮಾವೇಶದಲ್ಲಿ ಸಾವಿರಕ್ಕೂ ಹೆಚ್ಚು ಸ್ವಾಮೀಜಿಗಳು ಭಾಗವಹಿಸುವ ನಿರೀಕ್ಷೆಯಿದೆ.
ಈ ಸಮಾವೇಶದ ಉದ್ದೇಶ ಸಮಾಜವನ್ನು ಒಂದಾಗಿಸುವುದು. ವೀರಶೈವ ಬೇರೆ ಅಲ್ಲ, ಲಿಂಗಾಯತ ಬೇರೆ ಅಲ್ಲ. ‘ವೀರಶೈವ ಲಿಂಗಾಯತ ಒಂದು ವಿಶ್ವವೇ ಬಂಧು’ ಎಂಬ ಘೋಷವಾಕ್ಯದಡಿ ನಾವು ಒಂದಾಗಬೇಕು. ಪ್ರತ್ಯೇಕ ಧರ್ಮಕ್ಕಾಗಿ ಹೋರಾಟ ಮಾಡುವವರಿಗೂ ವಿನಂತಿ–ಮೊದಲು ಭಿನ್ನಾಭಿಪ್ರಾಯ ಬದಿಗಿಟ್ಟು ಏಕತೆಯ ಮಾರ್ಗದಲ್ಲಿ ಸಾಗೋಣ” ಎಂದು ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa