ಧಾರವಾಡ, 18 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ನ್ಯಾಯ ಕೋರಿ ಬರುವ ಸಾರ್ವಜನಿಕರಿಗೆ ಸಕ್ಷಮ ನ್ಯಾಯದಾನ ವ್ಯವಸ್ಥೆಯನ್ನು ಕಲ್ಪಿಸಿಕೊಡುತ್ತಿರುವ ಕಾನೂನು ಸೇವೆಗಳ ಪ್ರಾಧಿಕಾರದೊಂದಿಗಿನ ಸಾರ್ವಜನಿಕರು ಅಂತರವನ್ನು ಕಡಿಮೆಗೊಳಿಸಿ ನ್ಯಾಯದಾನ ವ್ಯವಸ್ಥೆಯನ್ನು ಭದ್ರಗೊಳಿಸುವ ಉದ್ದೇಶದಿಂದ ಸಮಾಜದ ನಾನಾ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಸೇವಾ ಮನೋಭಾವನೆಯನ್ನು ಹೊಂದಿದ್ದ ವ್ಯಕ್ತಿಗಳನ್ನು ಕಾನೂನು ಸೇವೆಗಳ ಪ್ರಾಧಿಕಾರದ ಕಛೇರಿಗಳ ವ್ಯಾಪ್ತಿಯಲ್ಲಿ ಅರೇ ಕಾನೂನು ಸ್ವಯಂ ಸೇವಕರಾಗಿ ರಾಜ್ಯ, ಜಿಲ್ಲೆ ಹಾಗೂ ತಾಲ್ಲೂಕಾ ಮಟ್ಟದಲ್ಲಿ ಸೇವೆ ಸಲ್ಲಿಸಲು ನಿಯೋಜನೆ ಮಾಡಿಕೊಳ್ಳಲಾಗುತ್ತಿದೆ.
ಈ ವಿಷಯದ ಕುರಿತು ಸಾರ್ವಜನಿಕರಿಗೆ ವ್ಯಾಪಕವಾಗಿ ಪ್ರಚಾರ ಮಾಡುವ ಉದ್ದೇಶದಿಂದ ಬೆಂಗಳೂರು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಸೆಪ್ಟೆಂಬರ 23, 2025 ರಂದು ಮಧ್ಯಾಹ್ನ 3 ಗಂಟೆಗೆ ಆನ್‍ಲೈನ್ ಮೂಲಕ ಸಭೆಯನ್ನು ಆಯೋಜಿಸಿದ್ದಾರೆ.
ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa