ಬೆಂಗಳೂರು, 18 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕನ್ನಡ ಚಲನಚಿತ್ರರಂಗದ ಅಭಿನಯ ಚಕ್ರವರ್ತಿ ಎಂದು ಖ್ಯಾತರಾದ ದಿವಂಗತ ನಟ ವಿಷ್ಣುವರ್ಧನ್ ಅವರ ಜನ್ಮದಿನವನ್ನು ರಾಜ್ಯಾದ್ಯಂತ ಅಭಿಮಾನಿಗಳು ಸ್ಮರಿಸಿಕೊಂಡರು.
ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ರಕ್ತದಾನ ಶಿಬಿರ, ಅನ್ನಸಂತರ್ಪಣೆ ಹಾಗೂ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಿ ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ಗೌರವ ಸಲ್ಲಿಸಿದರು.
ವಿಷ್ಣುವರ್ಧನ್ ಅವರು 200 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿ ಕನ್ನಡ ಸಿನಿರಂಗದಲ್ಲಿ ಅಪ್ರತಿಮ ಸ್ಥಾನ ಪಡೆದಿದ್ದರು. ಇತ್ತೀಚೆಗೆ ಕರ್ನಾಟಕ ಸರಕಾರ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa