ಇಂಡಿ-ಚಡಚಣ ತಾಲೂಕಿನ ಗ್ರಾಮಗಳಿಗೆ ಡಿಸಿ-ಸಿಇಓ ಭೇಟಿ
ವಿಜಯಪುರ, 19 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಮಳೆಯಿಂದ ಪ್ರವಾಹ ಪರಿಸ್ಥಿತಿ ಎದುರಾಗಿರುವ ಜಿಲ್ಲೆಯ ಇಂಡಿ ಹಾಗೂ ಚಡಚಣ ತಾಲೂಕಿನ ಗ್ರಾಮಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶುಕ್ರವಾ
ಡಿಸಿ


ವಿಜಯಪುರ, 19 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಮಳೆಯಿಂದ ಪ್ರವಾಹ ಪರಿಸ್ಥಿತಿ ಎದುರಾಗಿರುವ ಜಿಲ್ಲೆಯ ಇಂಡಿ ಹಾಗೂ ಚಡಚಣ ತಾಲೂಕಿನ ಗ್ರಾಮಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶುಕ್ರವಾರ ಜಿಲ್ಲೆಯ ಗುಂದವಾನ, ನಂದರಗಿ, ಶೀಗನಾಪುರ, ಧೂಮಕನಾಳ, ದೇವರನಿಂಬರಗಿ, ಹಾಗೂ ಜಿಗಜೇವಣಿ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿರುವುದರಿಂದ ರೈತರ ಜಮೀನಿನಲ್ಲಿ ಕೆರೆ ಮತ್ತು ಹಳ್ಳದ ನೀರು ಹರಿಯುತ್ತಿರುವುದರಿಂದ ಬೆಳೆ ನಷ್ಟವಾಗಿರುವ ಕುರಿತು ವೀಕ್ಷಣೆ ನಡೆಸಿದರು.

ಬೆಳೆ ಹಾನಿ ಕುರಿತು ಸಮೀಕ್ಷೆ ಕೈಗೊಂಡು ಒಂದು ವಾರದೊಳಗೆ ಸೂಕ್ತ ವರದಿಯನ್ನು ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಇಂಡಿ ಉಪವಿಭಾಗಾಧಿಕಾರಿ ಶ್ರೀಮತಿ. ಅನುರಾಧ ವಸ್ತ್ರದ ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ, ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ಸಂಜಯ ಖಡಗೇಕರ, ತಹಶಿಲ್ದಾರರ ಸಂಜಯ್ ಇಂಗಳೆ, ಉಪ ಕೃಷಿ ನಿರ್ದೇಶಕ(ಇಂಡಿ) ಚಂದ್ರಕಾಂತ್ ಪವಾರ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರಾಹುಲ ಭಾವಿದೊಡ್ಡಿ, ಸಹಾಯಕ ಕೃಷಿ ನಿರ್ದೇಶಕ ಮಹದೇವಪ್ಪ ಏವೂರ್, ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಅಭಿಯಂತರ ಬನಸೋಡೆ, ಬಾನಿ, ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯ ಸಹಾಯಕ ಅಭಿಯಂತ ಜಮಾದಾರ್ ಮತ್ತು ಸಂಬಂಧಪಟ್ಟ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಆಡಳಿತ ಅಧಿಕಾರಿಗಳು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande