ಕೊಪ್ಪಳ , 19 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಸರ್ಕಾರದ ನಿರ್ದೇಶನದನ್ವಯ ಅಕ್ಟೋಬರ್ 7 ರಂದು ಯಲಬುರ್ಗಾ ಹಾಗೂ ಕುಕನೂರು ತಾಲ್ಲೂಕು ಕೇಂದ್ರಗಳಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಬೇಕಾಗಿದ್ದು, ಈ ಬಗ್ಗೆ ಚರ್ಚಿಸಲು ಸೆ.23 ರಂದು ಬೆಳಿಗ್ಗೆ 11 ಗಂಟೆಗೆ ಯಲಬುರ್ಗಾ ತಹಶೀಲ್ದಾರ ಅವರ ಕಾರ್ಯಾಲಯದಲ್ಲಿ ಹಾಗೂ ಸೆ.24 ರಂದು ಮಧ್ಯಾಹ್ನ 3.30 ಗಂಟೆಗೆ ಕುಕನೂರಿನ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಆಯಾ ತಾಲ್ಲೂಕು ತಹಶೀಲ್ದಾರರು ವಹಿಸಿಕೊಳ್ಳವರು. ಈ ಸಭೆಗೆ ಸಮುದಾಯದ ಮುಖಂಡರು, ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಆಗಮಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಭೆಯನ್ನು ಯಶಸ್ವಿಗೊಳಿಸಬೇಕು ಎಂದು ಯಲಬುರ್ಗಾ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು(ಗ್ರೇಡ್-2) ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್