ಬೆಂಗಳೂರು, 19 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ ರಾಜ್ಯ ಸರ್ಕಾರದ ನಿಲುವಿನ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿರುವ ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ.
ಮೈಸೂರು ದಸರಾವನ್ನು ಧಾರ್ಮಿಕ ನೆಲೆಗಟ್ಟಿಗೆ ಸೀಮಿತವಾಗಿಸಲು ಸಾಧ್ಯವಿಲ್ಲ. ಜಾತಿ, ಧರ್ಮಗಳನ್ನು ಮೀರಿ ನಾಡಿನ ಸಮಸ್ತ ಜನರು ಕೂಡಿ ಸಂಭ್ರಮಿಸುವ ಹಬ್ಬವೆಂದು ನಾವು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೆವು, ಆದರೂ ಇದರ ವಿರುದ್ಧ ವ್ಯವಸ್ಥಿತ ಅಪಪ್ರಚಾರ ನಡೆಸಿ, ಸಮಾಜವನ್ನು ಒಡೆಯುವ ಪ್ರಯತ್ನ ಮಾಡಲಾಯಿತು. ಈಗ ಸರ್ವೋಚ್ಚ ನ್ಯಾಯಾಲಯದ ತೀರ್ಪಿನಿಂದ ನಮ್ಮ ಸರ್ಕಾರದ ನಿಲುವಿಗೆ ಮನ್ನಣೆ ದೊರೆತಿದೆ ಎಂದು ಭಾವಿಸುತ್ತೇನೆ ಎಂದು ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಹೇಳಿದ್ದಾರೆ.
ಜಾತಿ, ಧರ್ಮಗಳ ವೈಷಮ್ಯ ಬಿತ್ತುವ ವಿಚ್ಛಿದ್ರಕಾರಿ ಮನಸುಗಳಿಗೆ ಇನ್ನಾದರೂ ತಾಯಿ ಚಾಮುಂಡೇಶ್ವರಿ ಸದ್ಬುದ್ದಿ ನೀಡಲಿ ಎಂದು ಆಶಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa