ಬೆಂಗಳೂರು, 02 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆ ದಿನೇ ದಿನೇ ಹದಗೆಡುತ್ತಿರುವ ಸಂದರ್ಭದಲ್ಲಿ, ಕಾಂಗ್ರೆಸ್ ಸರ್ಕಾರದ ಧೋರಣೆ ವಿರುದ್ಧ ಪ್ರತಿಪಕ್ಷ ನಾಯಕ ಆರ್. ಅಶೋಕ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಅವರು, ಹೊಟ್ಟೆಗೆ ಹಿಟ್ಟಿಲ್ಲ ಜುಟ್ಟಿಗೆ ಮಲ್ಲಿಗೆ ಎನ್ನುವಂತೆ, ನಡು ರಸ್ತೆಯಲ್ಲಿ ಕೆಟ್ಟು ನಿಲ್ಲುತ್ತಿರುವ ಬಸ್ಸುಗಳ ದುರಸ್ತಿಗೆ, ಹೊಸ ಬಸ್ಸುಗಳ ಖರೀದಿಗೆ, ಸಾರಿಗೆ ನೌಕರರ ಹಿಂಬಾಕಿ ವೇತನ ಪಾವತಿಗೆ ದುಡ್ಡಿಲ್ಲವೆಂದು ಹೇಳುತ್ತಿರುವ ಸರ್ಕಾರ, ಈಗ ಸ್ವಂತ ಹೆಲಿಕಾಪ್ಟರ್ ಹಾಗೂ ಜೆಟ್ ಖರೀದಿಗೆ ಮುಂದಾಗಿರುವುದು ಹಾಸ್ಯಾಸ್ಪದ ಹಾಗೂ ನಾಚಿಕೆಗೇಡು ಎಂದು ವಾಗ್ದಾಳಿ ನಡೆಸಿದ್ದಾರೆ.
ಸಾರಿಗೆ ನಿಗಮಗಳನ್ನು ಸರ್ವನಾಶ ಮಾಡುವ ಮಟ್ಟಕ್ಕೆ ತಂದು, ಬಸ್ ನಿಲ್ದಾಣಗಳನ್ನು ಹರಾಜು ಹಾಕುವ ಪರಿಸ್ಥಿತಿಯನ್ನೇ ಕಾಂಗ್ರೆಸ್ ತಂದಿಟ್ಟಿದೆ ಎಂದು ಅಶೋಕ ಆರೋಪಿಸಿದ್ದು, ಜನರಿಗೆ ಕನಿಷ್ಠ ಸೌಕರ್ಯ ಕಲ್ಪಿಸುವುದಕ್ಕಿಂತ ಮುಖ್ಯಮಂತ್ರಿಗಳು ಹಾಗೂ ಸಚಿವರ ಐಷಾರಾಮಿ ಶೋಕಿಯೇ ಮುಖ್ಯವಾಗಿದೆ. ಇಂತಹ ಲಜ್ಜೆಗೆಟ್ಟ ಧೋರಣೆಗೆ ಕನ್ನಡಿಗರು ರೋಸಿ ಹೋಗಿದ್ದಾರೆ ಎಂದು ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa