ಚಿತ್ರದುರ್ಗ, 02 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಜಾರಿ ನಿರ್ದೇಶನಾಲಯದ ವಶದಲ್ಲಿರುವ ಕರ್ನಾಟಕದ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಇಡಿ ಮತ್ತೆ ದಾಳಿ ನಡೆಸಿದೆ. ಚಿತ್ರದುರ್ಗದ ಚಳ್ಳಕೆರೆಯ ಹಳೆಯ ಟೌನ್ ಮನೆಯಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ.
ಆನ್‌ಲೈನ್ ಬೆಟ್ಟಿಂಗ್ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಮನೆಯೊಳಗೆ ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದು, ಹೊಸ ಸಾಕ್ಷ್ಯಗಳ ಶೋಧದಲ್ಲಿ ನಿರತರಾಗಿದ್ದಾರೆ ಎಂದು ತಿಳಿದು ಬಂದಿದೆ.
ವೀರೇಂದ್ರ ಪಪ್ಪಿಯ ಚಿತ್ರದುರ್ಗ ಕೋಟೆಯಲ್ಲಿರುವ ಮನೆಯಲ್ಲೂ ಇಡಿ ಅಧಿಕಾರಿಗಳು ತಪಾಸಣೆ ನಡೆಸಿದ್ದು, ಕೋಟೆಯಲ್ಲಿ ನಿಲ್ಲಿಸಿರುವ ನಾಲ್ಕು ಐಷಾರಾಮಿ ಕಾರುಗಳನ್ನು ಜಪ್ತಿ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಇದಕ್ಕೂ ಮೊದಲು ಆಗಸ್ಟ್ 22ರಂದು ಬೆಳಗ್ಗೆ 5 ಗಂಟೆಯಿಂದ ಮಧ್ಯರಾತ್ರಿ ವರೆಗೂ ಇಡಿ ಅಧಿಕಾರಿಗಳು ವಿರೇಂದ್ರ ಮನೆಗೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಮಾಡಿದ್ದರು. ಆ ವೇಳೆ ಕೋಟ್ಯಾಂತರ ರೂಪಾಯಿ ನಗದು, ಚಿನ್ನಾಭರಣ, ವಿದೇಶಿ ಕರೆನ್ಸಿ ಸೇರಿದಂತೆ ಅಪಾರ ಸಂಪತ್ತು ವಶಪಡಿಸಿಕೊಳ್ಳಲಾಗಿತ್ತು.
ಈಗಾಗಲೇ ಇಡಿ ವಶದಲ್ಲಿರುವ ಶಾಸಕ ವೀರೇಂದ್ರ ಪಪ್ಪಿ ವಿಚಾರಣೆ ಮುಂದುವರೆದಿದ್ದು ವಿಚಾರಣೆ ವೇಳೆ ನೀಡಿರುವ ಹೇಳಿಕೆ ಆಧಾರದ ಮೇಲೆ ಇಂದು ಇಡಿ ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa