ವಿಜಯಪುರ, 02 ಸೆಪ್ಟೆಂಬರ್ (ಹಿ.ಸ.) ;
ಆ್ಯಂಕರ್ : ಮೀನುಗಾರಿಕೆ ಇಲಾಖೆಯು ಪ್ರಸಕ್ತ ಸಾಲಿಗೆ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮದಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆಯ್ದ ಮೀನುಗಾರರಿಗೆ ನಾಲ್ಕು ಚಕ್ರದ ವಾಹನ ಖರೀದಿಸಲು ಶೇ.೫೦ ರಷ್ಟು ಅಥವಾ ಗರಿಷ್ಟ ೩ ಲಕ್ಷ ರೂ.ಗಳ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸೆಪ್ಟೆಂಬರ ೯ ರೊಳಗಾಗಿ ಸಲ್ಲಿಸುವಂತೆ ಮೀನುಗಾರಿಕೆ ಉಪನಿರ್ದೇಶಕ ಅಂಜನಾದೇವಿ ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಬಾಗಲಕೋಟೆ ಉಪನಿರ್ದೇಶಕರ ಕಚೇರಿ (೯೦೦೮೬೯೭೬೯೯), ಮೀನುಗಾರಿಕೆ ಸಹಾಯಕ ನಿರ್ದೇಶಕರು ಬಾದಾಮಿ (೮೦೯೫೩೦೩೧೦೪) ಮತ್ತು ಜಮಖಂಡಿ (೯೮೮೬೮೨೦೭೬೧)ಗೆ ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande