ನಾಗ್ಪುರ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ
ನಾಗ್ಪುರ್, 02 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಮಹಾರಾಷ್ಟ್ರದ ನಾಗ್ಪುರ ವಿಮಾನ ನಿಲ್ದಾಣದಿಂದ ಕೋಲ್ಕತ್ತಾಗೆ ಹೊರಟಿದ್ದ ಇಂಡಿಗೋ 6E-812 ಸಂಖ್ಯೆಯ ವಿಮಾನವು ಮಂಗಳವಾರ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನದಲ್ಲಿದ್ದ 272 ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
Landing


ನಾಗ್ಪುರ್, 02 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಮಹಾರಾಷ್ಟ್ರದ ನಾಗ್ಪುರ ವಿಮಾನ ನಿಲ್ದಾಣದಿಂದ ಕೋಲ್ಕತ್ತಾಗೆ ಹೊರಟಿದ್ದ ಇಂಡಿಗೋ 6E-812 ಸಂಖ್ಯೆಯ ವಿಮಾನವು ಮಂಗಳವಾರ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನದಲ್ಲಿದ್ದ 272 ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಮೂಲಗಳ ಪ್ರಕಾರ, ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಹಕ್ಕಿಯೊಂದು ವಿಮಾನದ ಮುಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ಎಂಜಿನ್ ನಲ್ಲಿ ದೋಷ ಉಂಟಾಗಿ ವಿಮಾನ ಅಸಮತೋಲನಗೊಂಡಿತು. ಈ ಪರಿಸ್ಥಿತಿಯಲ್ಲಿ ಪೈಲಟ್ ತಕ್ಷಣ ಜಾಗೃತಿಯಿಂದ ತುರ್ತು ಭೂಸ್ಪರ್ಶ ಮಾಡಿದ್ದಾರೆ. ಇದರಿಂದಾಗಿ ದೊಡ್ಡ ಅಪಘಾತ ತಪ್ಪಿದಂತಾಗಿದೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಟೇಕ್ ಆಫ್ ನಂತರ ಇದ್ದಕ್ಕಿದ್ದಂತೆ ದೊಡ್ಡ ಶಬ್ದ ಕೇಳಿಬಂದಿತು. ಪ್ರಯಾಣಿಕರಲ್ಲಿ ಗದ್ದಲ ಸೃಷ್ಟಿಯಾದರೂ ಸಿಬ್ಬಂದಿ ಸದಸ್ಯರು ಎಲ್ಲರಿಗೂ ಶಾಂತವಾಗಿರಲು ಹಾಗೂ ಸೀಟ್ ಬೆಲ್ಟ್ ಕಟ್ಟಿಕೊಳ್ಳಲು ಸೂಚನೆ ನೀಡಿದರು.

ಹಿರಿಯ ವಿಮಾನ ನಿಲ್ದಾಣ ನಿರ್ದೇಶಕ ಅಬಿದ್ ರುಹಿ ಘಟನೆಯನ್ನು ದೃಢಪಡಿಸಿ, ವಿಮಾನವನ್ನು ತಾತ್ಕಾಲಿಕವಾಗಿ ಕಾರ್ಯಾಚರಣೆಯಿಂದ ಹಿಂಪಡೆಯಲಾಗಿದೆ. ನಿಖರ ಕಾರಣ ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ. ಡಿಜಿಸಿಎ ಹಾಗೂ ಇಂಡಿಗೋ ತಂಡಗಳು ತಾಂತ್ರಿಕ ಪರಿಶೀಲನೆ ನಡೆಸುತ್ತಿವೆ. ತನಿಖೆ ಪೂರ್ಣಗೊಂಡ ಬಳಿಕ ಅಧಿಕೃತ ವರದಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಪ್ರಸ್ತುತ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande