ವಿಜಯಪುರ, 02 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಭಾರತೀಯ ಸೇನೆ, ಯುನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ -೧, ೨(ಎ), ೩(ಎ) ಹಾಗೂ ೩(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಕಲಬುರ್ಗಿ ಜಿಲ್ಲಾ ಕೇಂದ್ರದಲ್ಲಿ ೨೦೨೫-೨೬ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ, ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡುತ್ತಿದ್ದು, ತರಬೇತಿಗಾಗಿ ಅರ್ಹ ೩ನೇ ಬ್ಯಾಚ್ ಪ್ರಾರಂಭಿಸಲು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸೆಪ್ಟೆಂಬರ್ ೧೦ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಬಾಗಲಕೋಟೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ( ೮೧೦೫೦೮೫೪೧೦, ೯೧೪೮೪೮೯೧೫೭ ) ಸಂಪರ್ಕಿಸಬಹುದು ಎಂದು ಕಲಬುರ್ಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande