ಪಿಡಿಓಗಳ ಪ್ರಗತಿ ಪರಿಶೀಲನಾ ಸಭೆ
ವಿಜಯಪುರ, 02 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ಪಂಚಾಯತ ಅಭಿವೃದ್ದಿ ಅಧಿಕಾರಿಗಳು ತಮ್ಮ ಮನಸ್ಥಿತಿ ಬದಲಾಯಿಸಿಕೊಂಡು ಕೆಲಸ ಮಾಡಿದಲ್ಲಿ ಮಾತ್ರ ಸುಧಾರಣೆ ಕಾಣಲು ಸಾಧ್ಯವೆಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್ ಹೇಳಿದರು. ಜಿಲ್ಲಾ ಪಂಚಾಯತ ನೂತನ ಸಭಾಭವನ
ಸಭೆ


ವಿಜಯಪುರ, 02 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ಪಂಚಾಯತ ಅಭಿವೃದ್ದಿ ಅಧಿಕಾರಿಗಳು ತಮ್ಮ ಮನಸ್ಥಿತಿ ಬದಲಾಯಿಸಿಕೊಂಡು ಕೆಲಸ ಮಾಡಿದಲ್ಲಿ ಮಾತ್ರ ಸುಧಾರಣೆ ಕಾಣಲು ಸಾಧ್ಯವೆಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್ ಹೇಳಿದರು.

ಜಿಲ್ಲಾ ಪಂಚಾಯತ ನೂತನ ಸಭಾಭವನದಲ್ಲಿ ಮಂಗಳವಾರ ಪಂಚಾಯತ ಅಭಿವೃದ್ದಿ ಅಧಿಕಾರಿಗಳಿಗೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ರಾಮ ಪಂಚಾಯತಿಯಲ್ಲಿ ಅಧಿಕಾರಿಗಳಿಂದ ಹಿಡಿದು ಸಿಬ್ಬಂದಿಗಳು ಕಚೇರಿಗೆ ಸಮಯಕ್ಕೆ ಸರಿಯಾಗಿ ಹಾಜರಾಗಬೇಕು. ಅಂದಾಗ ಮಾತ್ರ ಕೆಲಸಗಳು ಬಾಕಿ ಉಳಿಯುವದಿಲ್ಲ. ತಮ್ಮ ಮನೋಸ್ಥಿತಿಯನ್ನು ಬದಲಾಯಿಸಿಕೊಳ್ಳುವ ಅಗತ್ಯವಿದೆ. ಇಲ್ಲವಾದಲ್ಲಿ ಗ್ರಾಮಗಳ ಅಭಿವೃದ್ದಿ ಹೊಂದಲು ಸಾಧ್ಯವಾಗದು ಎಂದು ತಿಳಿಸಿದರು.

ತಮ್ಮ ಹಂತದಲ್ಲಿ ಕೈಗೊಂಡ ಅಭಿವೃದ್ದಿ ಕಾಮಗಾರಿಗಳು ಸರಿಯಾಗಿ ನಡೆಯುತ್ತಿರುವ ಬಗ್ಗೆ ಪರಿಶೀಲಿಸುವ ಕಾರ್ಯವಾಗಬೇಕು. ಮಕ್ಕಳ ಸಭೆ, ತಮ್ಮ ವ್ಯಾಪ್ತಿಯ ಶಾಲೆಗಳಿಗೆ ಭೇಟಿ ನೀಡಿ ಮೂಲಭೂತ ಸೌಲಭ್ಯ ಇರುವ ಬಗ್ಗೆ ಪರಿಶೀಲಿನೆ ಮಾಡುವುದು, ಮಕ್ಕಳಿಗೆ ನೀಡುತ್ತಿರುವ ಮಧ್ಯಾಹ್ನ ಬಿಸಿಊಟ, ಶೌಚಾಲಯ ವ್ಯವಸ್ಥೆ ಇರುವ ಬಗ್ಗೆ ಗಮನ ಹರಿಸಬೇಕು. ಶಿಕ್ಷಕರು ಸರಿಯಾದ ಸಮಯಕ್ಕೆ ಶಾಲೆಗೆ ಬಂದು ಪಾಠ ಬೋಧನೆ ಮಾಡುತ್ತಿರುವ ಬಗ್ಗೆ ಹಾಗೂ ಬಾಲ್ಯವಿವಾಹ ನಡೆಯದಂತೆ ನೋಡಿಕೊಳ್ಳುವ ಕೆಲಸವಾಗಬೇಕು ಎಂದ ಅವರು ಅನುಮತಿ ಪಡೆಯದೇ ಸಭೆಗೆ ಗೈರು ಹಾಜರಾದ ಪಿಡಿಓಗಳಿಗೆ ನೋಟಿಸ್ ನೀಡಲು ಸೂಚನೆ ನೀಡಿದರು.

ಇ-ಗ್ರಾಮ ಸ್ವರಾಜ ಅಡಿಯಲ್ಲಿ ಸರ್ವೆ ಕಾರ್ಯಕ್ಕೆ ಬಾಕಿ ಉಳಿಸಿಕೊಂಡ ಬಿಲ್ ಪಾವತಿಗೆ ಬುಧವಾರ ಸಂಜೆವರೆಗೆ ಗುಡುವು ನೀಡಿದರು.

ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ನೀರಿಕ್ಷಿತ ಮಟ್ಟದಲ್ಲಿ ಕರ ಸಂಗ್ರಹ ಆಗುತ್ತಿಲ್ಲ. ಹುನಗುಂದ ಮತ್ತು ಇಳಕಲ್ಲ ತಾಲೂಕು ಕೇವಲ ಶೇ.೩೫ ರಷ್ಟು ಕರ ವಸೂಲಾತಿಯಲ್ಲಿ ಪ್ರಗತಿ ಸಾಧಿಸಿದರೆ, ಉಳಿದ ತಾಲೂಕುಗಳು ಶೇ.೪೦ಕ್ಕಿಂತ ಹೆಚ್ಚಿಗೆ ಇವೆ. ಪ್ರತಿಯೊಂದು ಪ್ರಗತಿಯಲ್ಲಿ ಹಿಂದೆ ಇದ್ದಾರೆ. ಈ ಬಗ್ಗೆ ತಮ್ಮನ್ನು ತಾವು ಆತ್ಮಾವಲೋಕನ ಮಾಡಿಕೊಂಡು ಕೆಲಸದಲ್ಲಿ ಚುರುಕುಗೊಳ್ಳಬೇಕು. ಇಲ್ಲವಾದಲ್ಲಿ ಕ್ರಮಕ್ಕೆ ಮುಂದಾಗಬೇಕಾಗುತ್ತದೆ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಎನ್.ವಾಯ್.ಬಸರಿಗಿಡದ ಮಾತನಾಡಿ ಗ್ರಾಮ ಪಂಚಾಯತ ಮಟ್ಟದಲ್ಲಿ ಪ್ರತಿ ಸೋಮವಾರ ಅಭಿಯಾನ ಹಮ್ಮಿಕೊಂಡು ಕರ ಸಂಗ್ರಹಣೆಗೆ ಮುಂದಾಗಬೇಕು. ಅಲ್ಲದೇ ಪ್ರತಿ ತಿಂಗಳು ೧೫ನೇ ತಾರೀಖಿಗೆ ವಿಶೇಷ ಅಭಿಯಾನ ನಡೆಸಲಾಗುತ್ತಿದ್ದು, ಜಿಲ್ಲಾ ಪಂಚಾಯತಿಯಿ0ದ ವಸೂಲಿಗೆ ಗುರಿ ನಿಗದಿಪಡಿಸಲಾಗುತ್ತದೆ. ಇದನ್ನು ಅರಿತು ಕರ ವಸೂಲಾತಿಗೆ ಕ್ರಮ ವಹಿಸಲು ತಿಳಿಸಿದರು.

ಜಿಲ್ಲಾ ಪಂಚಾಯತಿಯ ಪ್ರತಿಯೊಂದು ವಿಭಾಗದಿಂದ ಯಾವ ಗ್ರಾಮ ಪಂಚಾಯತಿ ಎಷ್ಟು ಪ್ರಗತಿ ಸಾಧಿಸಿದೆ ಎಂಬ ಮಾಹಿತಿಯನ್ನು ರವಾನೆ ಮಾಡಲಾಗುತ್ತಿದೆ. ಈ ಮಾಹಿತಿಯನು ನೋಡಿ ಯಾಗ ವಿಭಾಗದಲ್ಲಿ ಪ್ರಗತಿ ಕುಂಟಿತವಾಗಿದೆ ಎಂಬುದನ್ನು ಅರಿವು ಪ್ರಗತಿ ಸಾಧಿಸಲು ಮುಂದಾಗಬೇಕು ಎಂದರು.

ನ0ತರ ನಿಗದಿತ ಅವಧಿಯಲ್ಲಿ ಕೂಲಿ ಪಾವತಿ, ಅಟಲ್ ಭೂಜಲ, ಸವಳು ಜವಳು ಭೂಮಿ ಅಭಿವೃದ್ದಿ, ಬಾಪೂಜಿ ಸೇವಾ ಕೇಂದ್ರ, ೧೪ ಮತ್ತು ೧೫ನೇ ಹಣಕಾಸು ಪ್ರಗತಿ, ಇ-ಸ್ವತ್ತು ಅರ್ಜಿ ವಿಲೇವಾರಿ, ದಿ ನದ ೨೪ ಗಂಟೆಗಳ ನೀರು ಸರಬರಾಜು, ಡಿಜಿಟಲ್ ಲೈಬ್ರರಿ, ಸ್ವಚ್ಛಭಾರತ ಮಿಷನ್, ವಸತಿ ಯೋಜನೆ, ಜಲಜೀವನ ಮಿಷನ್ ಹಾಗೂ ಕುಂದು ಕೊರತೆಗಳ ಬಗ್ಗೆ ಪರಿಶೀಲನೆ ನಡೆಸಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ಅಲ್ಲಮಪ್ರಭು, ಸಹಾಯಕ ಯೋಜನಾಧಿಕಾರಿ ಎಸ್.ಎಂ.ಕಾ0ಬಳೆ, ಮುಖ್ಯ ಲೆಕ್ಕಾಧಿಕಾರಿ ಸಿದ್ದರಾಮೇಶ್ವರ ಉಕ್ಕಲಿ ಸೇರಿದಂತೆ ಎಲ್ಲ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಗ್ರಾಮ ಪಂಚಾಯತ ಅಭಿವೃದ್ದಿ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande