ನವದೆಹಲಿ, 02 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಪಂಜಾಬ್‌ನಲ್ಲಿ ಉಂಟಾದ ಭೀಕರ ಪ್ರವಾಹದಲ್ಲಿ 2.5 ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದು, ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಳವಾದ ಸಂತಾಪ ವ್ಯಕ್ತಪಡಿಸಿದ್ದಾರೆ. ನಷ್ಟ ಅನುಭವಿಸಿದ ಕುಟುಂಬಗಳಿಗೆ ತಮ್ಮ ಸಾಂತ್ವನವನ್ನು ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಈ ಕುರಿತು ಸಂದೇಶ ಬಿಡುಗಡೆ ಮಾಡಿರುವ ಅವರು, ಪಂಜಾಬ್‌ನ ಹಿರಿಯ ಕಾಂಗ್ರೆಸ್ ನಾಯಕರೊಂದಿಗೆ ಮಾತನಾಡಿದ್ದು, ಕಾಂಗ್ರೆಸ್ ಪಕ್ಷವು ಸಾಧ್ಯವಿರುವ ಎಲ್ಲ ರೀತಿಯ ಸಹಾಯ ಮತ್ತು ಬೆಂಬಲವನ್ನು ನೀಡುತ್ತದೆ ಎಂದು ಭರವಸೆ ನೀಡಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರವಾಹ ಪೀಡಿತರಿಗೆ ತಕ್ಷಣ ಪರಿಹಾರ ಮತ್ತು ಪುನರ್ವಸತಿ ಕ್ರಮ ಕೈಗೊಳ್ಳಬೇಕು, ತ್ವರಿತ ವೈದ್ಯಕೀಯ ನೆರವು ಒದಗಿಸಬೇಕು, ಹಿಮಾಚಲ ಪ್ರದೇಶ, ಜಮ್ಮು-ಕಾಶ್ಮೀರ, ಪಂಜಾಬ್, ಉತ್ತರಾಖಂಡ ಮತ್ತು ಹರಿಯಾಣಕ್ಕೆ ವಿಶೇಷ ಪರಿಹಾರ ಪ್ಯಾಕೇಜ್ ತಕ್ಷಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ನೈಸರ್ಗಿಕ ವಿಕೋಪದ ಸಂದರ್ಭಗಳಲ್ಲಿ ರಾಜಕೀಯ ಮಾಡಬಾರದು, ಪೀಡಿತರಿಗೆ ಸಮರ್ಪಕ ಪರಿಹಾರ ಒದಗಿಸಲು ಪ್ರಧಾನ ಮಂತ್ರಿ ನಿಧಿಯನ್ನು ಬಳಸಿಕೊಳ್ಳಬೇಕು ಎಂದು ಖರ್ಗೆ ಒತ್ತಾಯಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa