ಬೀದರ್, 02 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕಳೆದ ಒಂದು ವಾರದಿಂದ ಬೀದರ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಹಲವೆಡೆ ಮನೆಗಳು ಕುಸಿದು ಜನತೆ ಸಂಕಷ್ಟ ಅನುಭವಿಸುತ್ತಿದ್ದಾರೆ. ಸಂಕಷ್ಟ ಕುಟುಂಬಗಳಿಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭಾಲ್ಕಿ ತಾಲೂಕಿನ 20 ರಿಂದ 50% ಕ್ಕಿಂತ ಹೆಚ್ಚು ಹಾನಿಗೊಳಗಾದ ಸುಮಾರು 36 ಸಂತ್ರಸ್ತ ಕುಟುಂಬಗಳಿಗೆ ತಲಾ 30 ಸಾವಿರ ರೂ. ಪರಿಹಾರದಂತೆ ಒಟ್ಟು 11 ಲಕ್ಷ ರೂ. ಪರಿಹಾರದ ಆದೇಶ ಪತ್ರಗಳನ್ನು ವಿತರಿಸಿ ಸಾಂತ್ವನ ಹೇಳಿದರು.
ಕೇವಲ ಭಾಲ್ಕಿಯಲ್ಲದೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಕೂಡ ತ್ವರಿತವಾಗಿ ಪರಿಹಾರ ವಿತರಣೆ ಮಾಡುವಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಸರ್ಕಾರ ಸದಾ ಸಂತ್ರಸ್ತ ಕುಟುಂಬಗಳ ಜೊತೆ ನಿಂತಿದೆ ಎಂದು ಖಂಡ್ರೆ ಭರವಸೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa