ವಿಜಯಪುರ, 2 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಮೀನುಗಾರಿಕೆ ಇಲಾಖೆಯಿಂದ 2025-26ನೇ ಸಾಲಿನ ರಾಜ್ಯ ವಲಯ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ನಾಲ್ಕು ಚಕ್ರ ವಾಹನ ಖರೀದಿಸಲು ಸಹಾಯಧನ ಪಡೆಯಲು ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಮೀನುಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಶೇ.50ರಷ್ಟು ಅಥವಾ ಗರಿಷ್ಠ 3 ಲಕ್ಷ ರೂಪಾಯಿ ಆರ್ಥಿ ನೆರವು ನೀಡಲಾಗುವುದು.
ಅರ್ಜಿಯನ್ನು ಸೆಪ್ಟಂಬರ್ 15ರೊಳಗಾಗಿ ಜಿಲ್ಲೆಯ ಆಯಾ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ವಿಜಯಪುರ, ಬಬಲೇಶ್ವರ, ತಿಕೋಟಾ, ದೇವರಹಿಪ್ಪರಗಿ, ಸಿಂದಗಿ ಆಲಮೇಲ, ಇಂಡಿ ಹಾಗೂ ಚಡಚಣ ತಾಲೂಕಿನ ಮೀನುಗಾರರು ವಿಜಯಪುರ ಮೀನುಗಾರಿಕೆ ಸಹಾಯಕ ನಿರ್ದೇಶಕರ ಮೊ: 9845927110 ಹಾಗೂ ಮುದ್ದೇಬಿಹಾಳ, ತಾಳಿಕೋಟೆ, ನಿಡಗುಂದಿ, ಕೊಲ್ಹಾರ, ಬ.ಬಾಗೇವಾಡಿ ತಾಲೂಕಿನ ಮೀನುಗಾರರು, ಮುದ್ದೇಬಿಹಾಳ ಮೀನುಗಾರಿಕೆ ಸಹಾಯಕ ನಿರ್ದೇಶಕರ ಮೊ: 9880210505 ಸಂಖ್ಯೆಎ ಸಂಪರ್ಕಿಸುವಂತೆ ಮೀನುಗಾರಿಕೆ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande