ಕೋಲಾರ, 0೨ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಮಕ್ಕಳು ತಮ್ಮ ತಂದೆ ತಾಯಿಯವರಿಗೆ ಗೌರವ ನೀಡುವುದು ಕಡಿಮೆ ಆಗಿದೆ. ಮಕ್ಕಳು ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಕಲಿಯುವುದು ಬಹಳ ಅವಶ್ಯ. ಮಕ್ಕಳು ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಗಮನವನ್ನು ನೀಡಿ ತಮ್ಮ ವಿದ್ಯಾಭ್ಯಾಸವನ್ನು ಉತ್ತಮವಾಗಿ ಮುಂದುವರಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ನಟೇಶ.ಆರ್ ತಿಳಿಸಿದರು.
ಕೋಲಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕೋಲಾರ ಹಾಗೂ ಸರ್ಕಾರಿ ಪ್ರೌಢಶಾಲೆ, ಅಣ್ಣೀಹಳ್ಳಿ ಗ್ರಾಮ ಹೋಳೂರು ಹೋಬಳಿ, ಕೋಲಾರ ತಾಲ್ಲೂಕು ಇವರ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ ಪ್ರೌಢಶಾಲೆಯ ಆವರಣ, ಅಣ್ಣೀಹಳ್ಳಿ, ಕೋಲಾರ ತಾಲ್ಲೂಕಿನಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಇತ್ತೀಚಿಗೆ ಶಿಕ್ಷಣದೊಂದಿಗೆ ಸಂಸ್ಕಾರ ಹಾಗೂ ಸಂಸ್ಕೃತಿಯನ್ನು ಕಲಿಸಿದರೆ ಮಕ್ಕಳ ಬದುಕು ಉಜ್ವಲವಾಗುತ್ತದೆ ಬಾಲ್ಯ ವಿವಾಹಗಳು ಹೆಚ್ಚುಗುತ್ತಿವೆ, ಬಾಲ್ಕ ವಿವಾಹ ನಿಷೇಧ ಕಾಯ್ದೆಯಲ್ಲಿ ೧೮ ವರ್ಷ ಒಳಗಿನ ಹೆಣ್ಣು ಮಕ್ಕಳು ಮತ್ತು ೨೧ ವರ್ಷ ಒಳಗಿನ ಗಂಡು ಮಕ್ಕಳು ಮದುವೆ ಆಗುವುದು ಅಪರಾಧ. ಮನೆಯಲ್ಲಿ ಬಾಲ್ಯ ವಿವಾಹ ಮಾಡಲು ಪ್ರಯತ್ನಿಸಿದರ ಸಹಾಯವಾಣಿ ೧೫೧೦೦ ಉಚಿತ ಕರೆ ಮಾಡಿ ತಿಳಿಸಬೇಕು. ಅಷ್ಟೇ ಅಲ್ಲದೆ ೧೮ ವರ್ಷದ ಒಳಗಿನ ಹೆಣ್ಣು ಮಕ್ಕಳು ಮತ್ತು ೨೧ ವರ್ಷದ ಒಳಗಿನ ಗಂಡು ಮಕ್ಕಳಿಗೆ ವಿವಾಹ ಮಾಡಿದರೆ ಅದು ಬಾಲ್ಯ ವಿವಾಹ ಆಗುತ್ತದೆ. ಬಾಲ್ಯ ವಿವಾಹ ಮಾಡುವವರಿಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆ ಅಡಿಯಲ್ಲಿ ೨ ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ ಅವಕಾಶ ಇರುತ್ತದೆ.
೧೮ ವರ್ಷದ ಒಳಗಿನ ಮಕ್ಕಳು ಮೋಟಾರು ವಾಹನಗಳನ್ನು ಚಲಾಯಿಸುತ್ತಿದ್ದು, ಅದು ಕಾನೂನು ಅಡಿಯಲ್ಲಿ ಅಪರಾಧ ಎಂದು ಮಾನ್ಯ ನ್ಯಾಯಾಧೀಶರು ತಿಳಿಸಿದರು.
ಮಕ್ಕಳು ಮಾಧಕ ವಸ್ತುಗಳು ಮತ್ತು ತಂಬಾಕು ಉತ್ಪನ್ನಗಳ ವ್ಯಸನಿಗಳಾಗುತ್ತಿದ್ದು, ಮಕ್ಕಳು ಅದರಿಂದ ದೂರ ಇರಬೇಕು ಎಂದು ತಿಳಿಸಿದರು. ಮಕ್ಕಳು ಒಳ್ಳೆಯ ಶಿಕ್ಷಣ ಪಡೆದು ಪಾಲಕರಿಗೆ ಒಳ್ಳೆಯ ಹೆಸರು ತರಬೇಕು. ವಿದ್ಯಾರ್ಥಿಗಳು ಪ್ರೀತಿ, ಪ್ರೇಮ ಎಂಬ ವ್ಯಾಮೋಹಕ್ಕೆ ಒಳಗಾಗಬಾರದು ಎಂದು ತಿಳಿಸಿದರು.
ಹೆಣ್ಣು ಮಕ್ಕಳು ಗಂಡು ಮಕ್ಕಳಂತೆ ನಮ್ಮ ಪಿತ್ರಾರ್ಜಿತ ಆಸ್ತಿಯಲ್ಲಿ ಸಮಾನವಾದ ಹಕ್ಕನ್ನು ಹೊಂದಿರುತ್ತಾರೆ ಎಂದು ಕಾನೂನಿನ ಅರಿವು ಮಕ್ಕಳಿಗೆ ತಿಳಿಸಿದರು. ವರದಕ್ಷಿಣೆ ಕೊಡುವುದು ಮತ್ತು ತೆಗೆದುಕೊಳ್ಳುವುದು ತಪ್ಪು ಆ ರೀತಿ ಕಂಡು ಬಂದಲ್ಲಿ ಕೊಡುವವರಿಗೆ ಮತ್ತು ತೆಗೆದುಕೊಳ್ಳುವವರಿಗೆ ಕಾನೂನು ಕಾಯ್ದೆಯ ಆಡಿ ಶಿಕ್ಷವಾಗುತ್ತದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳಿಗೆ ತಮ್ಮ ಜನನ ಪ್ರಮಾಣ ಪತ್ರ ಮಾಹಿತಿಯನ್ನು ನೀಡಿ, ತಮಲ್ಲಿ ಜನನ ಪ್ರಮಾಣ ಪತ್ರ ಇಲ್ಲವೆ ಇದ್ದಲ್ಲಿ ನಮ್ಮ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕೋಲಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕೋಲಾರಕ್ಕೆ ಮಾಹಿತಿ ನೀಡಿ ಪಡೆದುಕೊಳ್ಳಬಾಹುದು ಎಂದು ತಿಳಿಸಿದರು.
ಸಹಾಯಕ ಕಾನೂನು ನೆರವು ಅಭಿರಕ್ಷಕರು ಕಲಾವತಿ ಮಾತನಾಡಿ ಮಕ್ಕಳಿಗೆ ೧೮ ವರ್ಷದ ಒಳಗಿನ ಹೆಣ್ಣು ಮಕ್ಕಳು ಮತ್ತು ೨೧ ವರ್ಷದ ಒಳಗಿನ ಗಂಡು ಮಕ್ಕಳಿಗೆ ವಿವಾಹ ಮಾಡಿದರೆ ಆದು ಬಾಲ್ಯ ವಿವಾಹ ಆಗುತ್ತದೆ. ಬಾಲ್ಯ ವಿವಾಹ ಮಾಡುವವರಿಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆ ಅಡಿಯಲ್ಲಿ ಶಿಕ್ಷೆಯಾಗುತ್ತದೆ ಮತ್ತು ಮನೆಯಲ್ಲಿ ಬಾಲ್ಯ ವಿವಾಹ ಮಾಡಲು ಪ್ರಯತ್ನಿಸಿದರೆ ಮಕ್ಕಳ ಸಹಾಯವಾಣಿ ೧೦೯೮ ಗೆ ಕರೆ ಮಾಡಿ ತಿಳಿಸಬೇಕು. ಹೆಣ್ಣು ಮಕ್ಕಳಿಗೆ ಒಳ್ಳೆಯ ಸ್ಪರ್ಶ ಮತ್ತು ಕೆಟ್ಟ ಸ್ಪರ್ಶದ ಬಗ್ಗೆ ಮಾಹಿತಿಯನ್ನು ನೀಡಿದರು.
ಕೆಟ್ಟ ಸ್ವರ್ಶದ ಬಗ್ಗೆ ನಿಮಗೆ ಅನುಮಾನ ಬಂದರೆ ನಿಮ್ಮ ಶಾಲೆಯ ಶಿಕ್ಷಕರಿಗೆ ಅಥವಾ ನಿಮ್ಮ ತಂದೆ ತಾಯಿಗೆ ತಿಳಿಸುವಂತೆ ತಿಳುವಳಿಕೆಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಚಿತ್ರ : ಕೋಲಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕೋಲಾರ ಹಾಗೂ ಸರ್ಕಾರಿ ಪ್ರೌಢಶಾಲೆ, ಅಣ್ಣೀಹಳ್ಳಿ ಗ್ರಾಮ ಹೋಳೂರು ಹೋಬಳಿ, ಕೋಲಾರ ತಾಲ್ಲೂಕು ಇವರ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ ಪ್ರೌಢಶಾಲೆಯ ಆವರಣ, ಅಣ್ಣೀಹಳ್ಳಿ, ಕೋಲಾರ ತಾಲ್ಲೂಕಿನಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಉದ್ದೇಶಿಸಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ನಟೇಶ.ಆರ್ ಮಾತನಾಡಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್