ಸಿದ್ದರಾಮಯ್ಯ ವಿರುದ್ದ ಅಶೋಕ ವಾಗ್ದಾಳಿ
ಬೆಂಗಳೂರು, 20 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ರಾಜ್ಯ ರಾಜಕಾರಣದಲ್ಲಿ ಹಿಂದೂ ಧರ್ಮ, ಹಬ್ಬ ಮತ್ತು ದೇವಾಲಯ ನಿರ್ವಹಣೆ ಕುರಿತಾಗಿ ಬೃಹತ್ ರಾಜಕೀಯ ವಾಗ್ವಾದ ಉಂಟಾಗಿದೆ. ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣ ಎಕ್ಸನಲ್ಲಿ ತೀವ್ರ ವಾಗ್ದಾಳಿ ನಡೆ
ಸಿದ್ದರಾಮಯ್ಯ ವಿರುದ್ದ ಅಶೋಕ ವಾಗ್ದಾಳಿ


ಬೆಂಗಳೂರು, 20 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ರಾಜ್ಯ ರಾಜಕಾರಣದಲ್ಲಿ ಹಿಂದೂ ಧರ್ಮ, ಹಬ್ಬ ಮತ್ತು ದೇವಾಲಯ ನಿರ್ವಹಣೆ ಕುರಿತಾಗಿ ಬೃಹತ್ ರಾಜಕೀಯ ವಾಗ್ವಾದ ಉಂಟಾಗಿದೆ. ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣ ಎಕ್ಸನಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದು, ಹಿಂದೂ ಧರ್ಮದ ಆಚರಣೆಗಳಿಗೆ ಅಡ್ಡಿ ತರುವ ಬಗ್ಗೆ ಮುಖ್ಯಮಂತ್ರಿ “ವಿಕೃತ ಸಂತೋಷ” ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ತಾಯಿ ಚಾಮುಂಡೇಶ್ವರಿ, ಭುವನೇಶ್ವರಿ ಹಾಗೂ ಸಂಸ್ಕೃತಿಯ ಪ್ರತೀಕವಾದ ಅರಶಿಣ, ಕುಂಕುಮದ ಮೇಲಿನ ನಂಬಿಕೆಯನ್ನು ಗೌರವಿಸದೆ ದಸರಾ ಉದ್ಘಾಟನೆ ನಡೆಸಲು ಹಠಭರಿತ ನಿರ್ಧಾರ ಕೈಗೊಂಡಿದ್ದಾರೆ. ದುಬಾರಿ ಪಾಸ್ ನೆಪದಲ್ಲಿ ಜನಸಾಮಾನ್ಯರಿಗೆ ದಸರಾ ವೀಕ್ಷಣೆ ಕಷ್ಟಸಾಧ್ಯವಾಗಿದೆ ಎಂದು ದೂರಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ರಾಜ್ಯದಲ್ಲಿ 14 ಪ್ರಮುಖ ಮುಜರಾಯಿ ದೇವಸ್ಥಾನಗಳಲ್ಲಿ ಸೇವಾ ಶುಲ್ಕ ಏರಿಕೆ ಮಾಡಲಾಗಿದೆ ಎಂದು ಅಶೋಕ್ ಟೀಕಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande