ಬೆಂಗಳೂರು, 20 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಸೆಪ್ಟೆಂಬರ್ 22ರವರೆಗೆ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ಕೋಲಾರ ಹಾಗೂ ತುಮಕೂರು ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಭಾಗದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚು ಮಳೆಯ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa