ಹಾಸನ :ಗಣೇಶ ಮೂರ್ತಿಗೆ ಚಪ್ಪಲಿ‌ ಹಾರ ಹಾಕಿ ವಿಕೃತಿ
ಹಾಸನ, 21 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ದೇವಾಲಯದ ಕಬ್ಬಿಣದ ಬಾಗಿಲು ತೆರೆದು ಕಲ್ಲಿನ ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿರುವ ಘಟನೆ ಹಾಸನ ಜಿಲ್ಲೆ, ಬೇಲೂರು ಪಟ್ಟಣದಲ್ಲಿ ನಡೆದಿದೆ. ಸಾರಿಗೆ ಬಸ್ ನಿಲ್ದಾಣ ಮುಂಭಾಗದ ಬೇಲೂರು ಪುರಸಭೆ ಆವರಣದಲ್ಲಿರುವ ಶ್ರೀ ವಿದ್ಯಾಗಣಪತಿ ದೇವಾಲಯದಲ್ಲಿ ಪ್ರತಿನಿತ್
Ganesh


ಹಾಸನ, 21 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ದೇವಾಲಯದ ಕಬ್ಬಿಣದ ಬಾಗಿಲು ತೆರೆದು ಕಲ್ಲಿನ ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿರುವ ಘಟನೆ ಹಾಸನ ಜಿಲ್ಲೆ, ಬೇಲೂರು ಪಟ್ಟಣದಲ್ಲಿ ನಡೆದಿದೆ.

ಸಾರಿಗೆ ಬಸ್ ನಿಲ್ದಾಣ ಮುಂಭಾಗದ ಬೇಲೂರು ಪುರಸಭೆ ಆವರಣದಲ್ಲಿರುವ ಶ್ರೀ ವಿದ್ಯಾಗಣಪತಿ ದೇವಾಲಯದಲ್ಲಿ ಪ್ರತಿನಿತ್ಯ ಪೂಜೆ ಕೈಂಕರ್ಯಗಳು ನಡೆಯುತ್ತದೆ.

ಪ್ರತಿನಿತ್ಯ ವ್ಯಾಪಾರಿಗಳು ಬೆಳಗ್ಗೆ ಗಣೇಶಮೂರ್ತಿಗೆ ಕೈಮುಗಿದು ವ್ಯಾಪಾರ ಆರಂಭಿಸುತ್ತಾರೆ.

ಶನಿವಾರ ರಾತ್ರಿ ಪುರಸಭೆ ಗೇಟ್‌ಗೆ ಬೀಗ ಹಾಕಿಕೊಂಡು ತೆರಳಿದ್ದರು. ಇಂದು ಬೆಳಗ್ಗೆ ಭಕ್ತಾಧಿಗಳು ಕೈಮುಗಿಯಲು ಹೋದಾಗ ಗಣಪತಿಗೆ ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆದಿರುವುದು ಬೆಳಕಿಗೆ ಬಂದಿದೆ.

ಗೇಟ್ ತೆಗೆದು ದೇವರಿಗೆ ಚಪ್ಪಲಿ ಹಾರ ಹಾಕಿರುವ ದುರುಳರ ಕೃತ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಕೋಮು ಸೌಹಾರ್ದ ಕದಡಲು ಕೆಲವು ಕಿಡಿಗೇಡಿಗಳಿ ಇಂತಹ ದುಷ್ಕೃತ್ಯ ಎಸಗಿದ್ದು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲೇ ಘಟನೆ ನಡೆದಿದೆ

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande