ಬಳ್ಳಾರಿ : ಮಹಿಳೆಯರ ಮತ್ತು ಮಕ್ಕಳ ರಕ್ಷಣೆ ಕುರಿತು ನಾಳೆ ತರಬೇತಿ
ಬಳ್ಳಾರಿ, 21 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಜಿಲ್ಲೆಯ ಗ್ರಾಮಗಳ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತಿ ಮಹಿಳಾ ಅಧ್ಯಕ್ಷರುಗಳಿಗೆ “ಮಹಿಳೆಯರ ಮತ್ತು ಮಕ್ಕಳ ರಕ್ಷಣೆಯ ಕಾವಲು ಸಮಿತಿ ಹಾಗೂ ಬಾಲನ್ಯಾಯ ಕಾಯ್ದೆ, ಬಾಲ್ಯವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ” ಕುರಿತು ನಾ
ಬಳ್ಳಾರಿ : ಮಹಿಳೆಯರ ಮತ್ತು ಮಕ್ಕಳ ರಕ್ಷಣೆ ಕುರಿತು ಸೆ.22 ರಂದು  ತರಬೇತಿ


ಬಳ್ಳಾರಿ, 21 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ಜಿಲ್ಲೆಯ ಗ್ರಾಮಗಳ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತಿ ಮಹಿಳಾ ಅಧ್ಯಕ್ಷರುಗಳಿಗೆ “ಮಹಿಳೆಯರ ಮತ್ತು ಮಕ್ಕಳ ರಕ್ಷಣೆಯ ಕಾವಲು ಸಮಿತಿ ಹಾಗೂ ಬಾಲನ್ಯಾಯ ಕಾಯ್ದೆ, ಬಾಲ್ಯವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ” ಕುರಿತು ನಾಳೆ ಬೆಳಿಗ್ಗೆ 09 ಗಂಟೆಗೆ ನಗರದ ಜಿಲ್ಲಾ ಪಂಚಾಯತ್‌ನ ಹೊಸ ನಜೀರ್ ಸಾಬ್ ಸಭಾಂಗಣದಲ್ಲಿ ಒಂದು ದಿನ ತರಬೇತಿ ಕಾರ್ಯಾಗಾರ ಏರ್ಪಡಿಸಲಾಗಿದೆ.

ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಹಯೋಗದಲ್ಲಿ ಆಯೋಜಿಸಲಾಗಿದೆ.

ಕಾರ್ಯಾಗಾರವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೈರ್ ಅವರು ಉದ್ಘಾಟಿಸುವರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಜಿಲ್ಲಾ ಪಂಚಾಯತ್‌ನ ಉಪ ಕಾರ್ಯದರ್ಶಿ ಶಶಿಕಾಂತ ಶಿವಪೂರೆ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ವಿಜಯಲಕ್ಷಿ ಮೈದೂರು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ, ಕೊಪ್ಪಳದ ಮಕ್ಕಳ ಸಂರಕ್ಷಣಾ ಯೋಜನೆಯ ಯುನಿಸೆಫ್ ಪ್ರಾದೇಶಿಕ ಸಂಯೋಜಕ ಡಾ.ರಾಘವೇಂದ್ರ ಭಟ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸುವರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ ಅವರು ಅಧ್ಯಕ್ಷತೆ ವಹಿಸುವರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುಭದ್ರಾ ದೇವಿ ಅವರು ಪ್ರಾಸ್ತಾವಿಕವಾಗಿ ಮಾತನಾಡುವರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಕ್ಕಳ ರಕ್ಷಣಾಧಿಕಾರಿ (ಸಾಂಸ್ಥಿಕ ಸೇವೆ) ದೊಡ್ರನಗೌಡ್ರು ಮಂಜುನಾಥ ಕಾರ್ಯಾಗಾರ ನಿರೂಪಿಸುವರು. ಮಕ್ಕಳ ರಕ್ಷಣಾಧಿಕಾರಿ (ಅಸಾಂಸ್ಥಿಕ ಸೇವೆ) ಚನ್ನಬಸಪ್ಪ ಪಾಟೀಲ್ ಗಣ್ಯರನ್ನು ಸ್ವಾಗತಿಸುವರು. ಕಾನೂನು ಪರಿವೀಕ್ಷಣಾಧಿಕಾರಿ ಈಶ್ವರ್ ರಾವ್.ಸಿ ವಂದಿಸುವರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande