ತುಮಕೂರು, 22 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ತುಮಕೂರಿನಲ್ಲಿ ದಸರಾ ಉತ್ಸವವನ್ನು ಗೃಹ ಸಚಿವ ಜಿ. ಪರಮೇಶ್ವರ್ ನಂದಿ ಧ್ವಜ ಪೂಜೆಯ ಮೂಲಕ ಅಧಿಕೃತವಾಗಿ ಉದ್ಘಾಟಿಸಿದರು.
ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಧ್ವಜಾರೋಹಣದ ನಂತರ ಧಾರ್ಮಿಕ ಮಂಟಪವನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಸಚಿವರ ಪತ್ನಿ ಕನ್ನಿಕಾ ಪರಮೇಶ್ವರ್, ಕೇಂದ್ರ ಸಚಿವ ವಿ. ಸೋಮಣ್ಣ, ಶಾಸಕರಾದ ಜ್ಯೋತಿಗಣೇಶ್, ಸುರೇಶ್ ಗೌಡ, ಸಿದ್ದಗಂಗಾ ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ, ಮತ್ತು ಹನುಮಂತನಾಥ ಸ್ವಾಮೀಜಿ ಉಪಸ್ಥಿತರಿದ್ದರು.
ಉತ್ಸವವು ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ 11 ದಿನಗಳ ಕಾಲ ನಡೆಯಲಿದೆ. ಸಾರ್ವಜನಿಕರಿಗಾಗಿ ಜಿಲ್ಲೆಯ ಎಲ್ಲ ತಾಲೂಕುಗಳಿಂದ ಪ್ರತೀ ದಿನ 250 ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa