ಸಿಂಧನೂರು, 23 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಸಿಂಧನೂರ ತಾಲೂಕಿನ ಯಾಪಲಪರ್ವಿ ಕ್ರಾಸ್ ಬಳಿ ವಿ.ಸಿ.ಬಿ. ಶಾಲೆಯ ಆವರಣದಲ್ಲಿ ಸೆ.26ರ ಸಂಜೆ 4.30ಕ್ಕೆ ದಸರಾ ಕ್ರೀಡೆ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ.
ಈ ಹಿನ್ನಲೆಯಲ್ಲಿ ಮಹಿಳೆಯರಿಂದ ಪೂರ್ಣ ಕುಂಭ-ಕಳಸ ಮತ್ತು ಆಕರ್ಷಕ ಕಲಾ ತಂಡಗಳೊಂದಿಗೆ ಯಾಪಲಪರ್ವಿ ಕ್ರಾಸ್‍ನಿಂದ ವಿ.ಸಿ.ಬಿ. ಶಾಲೆಯ ಆವರಣದವರೆಗೆ ಮೆರವಣಿ ಹಾಗೂ ಹಸಿರು ದಸರಾ ಕಾರ್ಯಕ್ರಮದಡಿಯಲ್ಲಿ ಕ್ಲಷ್ಟರ್ ವ್ಯಾಪ್ತಿಯಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ರಾಜೇನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮೀಜಿ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಸಾಂಸ್ಕೃತಿಕ ಕಾರ್ಯಕ್ರಮಗಳು: ಖ್ಯಾತ ಜನಪದ ಕಲಾವಿದ ವೀರು ಜಮಖಂಡಿ ಇವರಿಂದ ಸಂಗೀತ ಗಾಯನ ಕಾರ್ಯಕ್ರಮ ಹಾಗೂ ಕೊಪ್ಪಳದ ರಂಗಧಾರ ರೇಪರ್ಟರಿ ತಂಡದಿಂದ ಶಿಕ್ಷಣ, ಆರೋಗ್ಯ, ಕೃಷಿಗೆ ಸಂಬಂಧಿಸಿದಂತೆ ಜಾಗೃತಿ ರೂಪಕ ನಾಟಕಗಳು, ಗ್ರಾಮೀಣ ಕಲಾ ತಂಡಗಳಿಂದ ಕಲೆ-ಸಂಸ್ಕೃತಿ-ಜನಪದ ಕಾರ್ಯಕ್ರಮ ಸೇರಿದಂತೆ ಶಾಲಾ-ಕಾಲೇಜು ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಾಗಿದೆ.
ಸ್ಪರ್ಧೆಗಳು : ಯಾಪಲಪರ್ವಿ ಗ್ರಾಮದ ವಿ.ಸಿ.ಬಿ. ಶಾಲೆಯ ಹತ್ತಿರ ಕ್ಲಸ್ಟರ್ ಮಟ್ಟದ ಕ್ರೀಡಾಸ್ಪರ್ಧೆಗಳು ನಡೆಯಲಿವೆ. ಪುರುಷರಿಗಾಗಿ ಕೆಸರಿನಲ್ಲಿ ಹಗ್ಗ ಜಗ್ಗಾಟ, ಕಬಡ್ಡಿ ಪಂದ್ಯಾವಳಿಗಳು ಹಾಗೂ ಮಹಿಳೆಯರಿಗಾಗಿ ಕೆಸರಿನಲ್ಲಿ ಹಗ್ಗ ಜಗ್ಗಾಟ, ಕಬಡ್ಡಿ, ರಂಗೋಲಿ, ರೊಟ್ಟಿ ತಟ್ಟುವ ಸ್ಪರ್ಧೆಗಳು ನಡೆಯಲಿವೆ ಎಂದು ಸಿಂಧನೂರು ದಸರಾ ಉತ್ಸವ ಸಮಿತಿ ಪ್ರಕಟಣೆ ತಿಳಿಸಿದೆ.
ಸಿಂಧನೂರು ತಾಲೂಕಾಡಳಿತ, ತಾಲೂಕ ಪಂಚಾಯಿತಿ, ನಗರಸಭೆ, ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಸಿಂಧನೂರು ದಸರಾ ಉತ್ಸವ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ನಡೆಯಲಿವೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್