ವಿಜಯಪುರ, 27 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ವಿಜಯಪುರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಯ್ದ ಮದರಸಾಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅಜೀಂ ಪ್ರೇಮ್ ಜೀ ಫೌಂಡೇಶನ್ ರವರ ಸಹಯೋಗದೊಂದಿಗೆ ಔಪಚಾರಿಕ ಶಿಕ್ಷಣ ವಿಷಯಗಳಾದ ಕನ್ನಡ, ಇಂಗ್ಲೀಷ,ವಿಜ್ಞಾನ ಹಾಗೂ ಗಣಿತ ವಿಷಯಗಳನ್ನು ಬೋಧಿಸಲು ಜಿಲ್ಲಾ ಹಂತದಲ್ಲಿ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಳ್ಳಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ದಿನಾಂಕ:04-10-2025 ಕೊನೆಯ ದಿನಾಂಕ ಇರುತ್ತದೆ. ಒಂದು ಮದರಸಾಗೆ ತಲಾ ಎರಡು ಶಿಕ್ಷಕರನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು, ಅಭ್ಯರ್ಥಿಗಳು https://docs.google.com/forms/d/e/1FAIpQLSeJ76UQIEXjbAA2Wkak_E5BXBrIGDnRcHu0eYtGf RGXZx5_qA/viewform?usp=header ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದೂರವಾಣಿ ಸಂಖ್ಯೆ:08352-295523 ಹಾಗೂ
ವಿಜಯಪುರ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರ, ಮೊಬೈಲ್ ಸಂಖ್ಯೆ: 8123710766, ಬಸವನ ಬಾಗೇವಾಡಿ
ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರ ಮೊಬೈಲ್ ಸಂಖ್ಯೆ: 99723407321, ಮುದ್ದೇಬಿಹಾಳ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರ ಮೊಬೈಲ್ ಸಂಖ್ಯೆ: 8722445552, ಸಿಂದಗಿ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರ ಮೊಬೈಲ್ ಸಂಖ್ಯೆ: 9035558609, ಇಂಡಿ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರ ಮೊಬೈಲ್ ಸಂಖ್ಯೆ: 9900109759 ಸಂಪರ್ಕಿಸಬಹುದಾಗಿದೆ ಎಂದು ವಿಜಯಪುರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande