ಕಲಬುರಗಿ, 27 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ನಿರಂತರ ಮಳೆ ಮತ್ತು ಉಕ್ಕಿ ಹರಿಯುತ್ತಿರುವ ನದಿಗಳಿಂದಾಗಿ ಕಲಬುರಗಿಯ 36 ಹಳ್ಳಿಗಳಿಗೆ ಅಪಾರ ಸಂಕಷ್ಟ ತಂದಿದ್ದು, ಜನರ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬಗಳನ್ನು ಸುರಕ್ಷಿತ ಎತ್ತರದ ಪ್ರದೇಶಗಳಿಗೆ ಸ್ಥಳಾಂತರಿಸಲು ರಾಜ್ಯ ಸರ್ಕಾರವು ಎಸ್ ಡಿಆರ್ ಎಫ್ ಮತ್ತು ಲಭ್ಯವಿರುವ ಪ್ರತಿಯೊಂದು ಸಂಪನ್ಮೂಲವನ್ನು ನಿಯೋಜಿಸಿದೆ. ಒಟ್ಟು 36 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ಇಲ್ಲಿ 1,500 ಕ್ಕೂ ಹೆಚ್ಚು ಜನರಿಗೆ ಊಟ ಮತ್ತು ವಸತಿ ವ್ಯವಸ್ಥೆ ಮಾಡಲಾಗಿದೆ.
ಈ ಕಷ್ಟದ ಸಮಯದಲ್ಲಿ ಜನರು ಮತ್ತು ಅವರ ಜಾನುವಾರುಗಳನ್ನು ರಕ್ಷಿಸಲು, ಜಿಲ್ಲಾಡಳಿತವು ಸ್ವಯಂಸೇವಕರ ಜೊತೆಗೆ ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಖರ್ಗೆ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa