ಧಾರವಾಡ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರು, ಉದ್ದಿನಕಾಳು ಖರೀದಿ ಕೇಂದ್ರ
ಧಾರವಾಡ, 27 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : 2025-26 ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಹೆಸರು ಕಾಳು ಉತ್ಪನ್ನವನ್ನು ಪ್ರತಿ ಕ್ವಿಂಟಾಲ್‍ಗೆ 8,768 ಹಾಗೂ ಉದ್ದಿನಕಾಳು ಉತ್ಪನ್ನವನ್ನು ರೂ.7,800 ರಂತೆ ಧಾರವಾಡ ಜಿಲ್ಲೆಯ ರೈತರಿಂದ ಮಾತ್ರ ಖರೀದಿ
Dc dwd


ಧಾರವಾಡ, 27 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : 2025-26 ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಹೆಸರು ಕಾಳು ಉತ್ಪನ್ನವನ್ನು ಪ್ರತಿ ಕ್ವಿಂಟಾಲ್‍ಗೆ 8,768 ಹಾಗೂ ಉದ್ದಿನಕಾಳು ಉತ್ಪನ್ನವನ್ನು ರೂ.7,800 ರಂತೆ ಧಾರವಾಡ ಜಿಲ್ಲೆಯ ರೈತರಿಂದ ಮಾತ್ರ ಖರೀದಿಸಲು ಸರ್ಕಾರದಿಂದ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ಜಿಲ್ಲೆಯ ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಹೆಸರುಕಾಳು ಮತ್ತು ಉದ್ದಿನಕಾಳು ಉತ್ಪನ್ನವನ್ನು ಖರೀದಿಸಲು ರೈತರ ನೋಂದಣಿಯು 80 ದಿನಗಳವರೆಗೆ (ಸೆಪ್ಟಂಬರ್ 25, 2025 ರಿಂದ ಡಿಸೆಂಬರ್ 13, 2025) ನಡೆಯಲಿದ್ದು, ಖರೀದಿ ಅವಧಿ 90 ದಿನಗಳವರೆಗೆ (ಸೆಪ್ಟಂಬರ್ 25, 2025 ರಿಂದ ಡಿಸೆಂಬರ್ 23, 2025) ರವರಿಗೆ ನಡೆಯುತ್ತದೆ. ಎಂದು ಅವರು ತಿಳಿಸಿದ್ದಾರೆ.

ಸರ್ಕಾರಿ ರಜೆ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಬೆಳಿಗ್ಗೆ 8 ರಿಂದ ಸಂಜೆ 6 ರವರೆಗೆ ಮಾತ್ರ ಖರೀದಿಸಲಾಗುವುದು.

ಯಾವುದೇ ಸಂದರ್ಭದಲ್ಲಿ ರೈತರು ಮಧ್ಯವರ್ತಿಗಳ ಮೊರೆ ಹೋಗಬಾರದು. ಇದರ ಉಪಯೋಗವನ್ನು ರೈತರೇ ನೇರವಾಗಿ ಪಡೆಯಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಧಾರವಾಡ, ಹುಬ್ಬಳ್ಳಿ, ಕುಂದಗೋಳ, ಅಣ್ಣಿಗೇರಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಯವರನ್ನು ಹಾಗೂ ಶಾಖಾ ವ್ಯವಸ್ಥಾಪಕರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ (ಕೆಎಸ್‍ಸಿಎಮ್‍ಎಫ್) ಹುಬ್ಬಳ್ಳಿ (ದೂರವಾಣಿ ಸಂಖ್ಯೆ: 0836-2004419) ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಟಾಸ್ಕಪೋರ್ಸ್ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande