ತಮಿಳು ನಟ ವಿಜಯ ದಳಪತಿ ರಾಜಕೀಯ ರ್‍ಯಾಲಿಯಲ್ಲಿ ಭೀಕರ ಕಾಲ್ತುಳಿತ:೩೧ಮಂದಿ ಸಾವು
ಚೆನೈ, 27 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ತಮಿಳು ನಟ ವಿಜಯ್ ದಳಪತಿ ಅವರು ಕರೂರಿನಲ್ಲಿ ಶನಿವಾರ ಆಯೋಜಿಸಿದ್ದ ರಾಜಕೀಯ ರ್‍ಯಾಲಿಯಲ್ಲಿ ಭೀಕರ ಕಾಲ್ತುಳಿತ ಸಂಭವಿಸಿದ್ದು, ಇದುವರೆಗೆ 31 ಜನರು ಸಾವನ್ನಪ್ಪಿದ್ದು, 20 ಜನರ ಸ್ಥಿತಿ ಗಂಭೀರವಾಗಿದ್ದು ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ ಎಂದು ಮೂಲಗಳು ತಿ
Stamped


ಚೆನೈ, 27 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ತಮಿಳು ನಟ ವಿಜಯ್ ದಳಪತಿ ಅವರು ಕರೂರಿನಲ್ಲಿ ಶನಿವಾರ ಆಯೋಜಿಸಿದ್ದ ರಾಜಕೀಯ ರ್‍ಯಾಲಿಯಲ್ಲಿ ಭೀಕರ ಕಾಲ್ತುಳಿತ ಸಂಭವಿಸಿದ್ದು, ಇದುವರೆಗೆ 31 ಜನರು ಸಾವನ್ನಪ್ಪಿದ್ದು, 20 ಜನರ ಸ್ಥಿತಿ ಗಂಭೀರವಾಗಿದ್ದು ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ

2026 ರ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಎಲ್ಲಾ ಪಕ್ಷಗಳು ಪ್ರಚಾರ ನಡೆಸುತ್ತಿವೆ. ತಮಿಳಗ ವೆಟ್ರಿ ಕಳಗಂ ಪಕ್ಷದ ನಾಯಕ ವಿಜಯ್ ಸೆಪ್ಟಂಬರ್​ 13 ರಿಂದ ಪ್ರತಿದಿನ ಎರಡು ಜಿಲ್ಲೆಗಳಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಶನಿವಾರ ಅವರು ನಮಕ್ಕಲ್ ಮತ್ತು ಕರೂರ್ ಜಿಲ್ಲೆಗಳಲ್ಲಿ ಪ್ರಚಾರದಲ್ಲಿ ಭಾಗಿಯಾಗಿದ್ದರು ಈ ವೇಳೆ ನೂಕುನುಗ್ಗಲಿಂದಾಗಿ ಕಾಲ್ತುಳಿತ ಸಂಭವಿಸಿದೆ.

ಪೊಲೀಸರು ತಕ್ಷಣ ಪ್ರಜ್ಞಾಹೀನ ಜನರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ದರು. ಆಸ್ಪತ್ರೆಯಲ್ಲಿ ಅವರಿಗೆ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ. ಇಲ್ಲಿಯವರೆಗೆ 31 ಜನರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. 20ಕ್ಕೂ ಹೆಚ್ಚು ಜನರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಮಾಹಿತಿ ಪಡೆದ ಮುಖ್ಯಮಂತ್ರಿ ಸ್ಟಾಲಿನ್ ಅವರು, ಅಲ್ಲಿನ ಎಲ್ಲಾ ಆಸ್ಪತ್ರೆಗಳನ್ನು ತಕ್ಷಣದ ಚಿಕಿತ್ಸೆಗೆ ಸಿದ್ಧವಾಗಿಡಲು ಆದೇಶಿಸಿದ್ದಾರೆ. ಅಲ್ಲದೆ ಸಚಿವರಾದ ಎಂ. ಸುಬ್ರಮಣಿಯನ್ ಮತ್ತು ಅನ್ಬಿಲ್ ಮಹೇಶ್ ಅವರನ್ನು ಖುದ್ದಾಗಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ಮೃತರ ಕುಟುಂಬಗಳಿಗೆ ತಮಿಳುನಾಡು ಸರಕಾರ ೧೦ ಲಕ್ಷ ಪರಿಹಾರ ಘೋಷಿಸಿದ್ದು, ಗಾಯಾಳುಗಳಿಗೆ ೧ ಲಕ್ಷ ಪರಿಹಾರ ಘೋಷಿಸಿದೆ.

ಪ್ರಧಾನಿ ಸೇರಿದಂತೆ ಹಲವರ ಸಂತಾಪ:

ತಮಿಳುನಾಡಿನ ಕರೂರಿನ ರಾಜಕೀಯ ರ್‍ಯಾಲಿಯಲ್ಲಿ ಸಂಭವಿಸಿದ ದುರದೃಷ್ಟಕರ ಘಟನೆ ತೀವ್ರ ದುಃಖ ಉಂಟುಮಾಡಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ನನ್ನ ಆಲೋಚನೆಗಳಿವೆ. ಈ ಸಂಕಷ್ಟದ ಸಮಯದಲ್ಲಿ ದೇವರು ಅವರಿಗೆ ಶಕ್ತಿ ನೀಡಲಿ. ಗಾಯಗೊಂಡ ಎಲ್ಲರೂ ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಗೃಹ ಸಚಿವ ಅಮಿತ್ ಶಾ,ರಕ್ಷಣಾ ಸಚಿವ ರಾಜನಾಥ ಸಿಂಗ್, ಉಪ ರಾಷ್ಟ್ರಪತಿ ರಾಧಾಕೃಷ್ಣನ್ ಸೇರಿದಂತೆ ಹಲವರು ಘಟನೆಗೆ ಸಂತಾಪ ಸೂಚಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande