ವಿಜಯಪುರ, 27 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ನೆರೆಯ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಹಿನ್ನೆಲೆ ಸಿಂದಗಿ, ಆಲಮೇಲನಲ್ಲಿ ಪ್ರವಾಹ ಉಂಟಾಗಿದೆ. ವಿಜಯಪುರ ಜಿಲ್ಲೆಯ ಆಲಮೇಲ ತಾಲ್ಲೂಕಿನ ಶಂಬೇವಾಡ ಗ್ರಾಮದಲ್ಲಿ ಭೀಮಾ ನದಿಯ ಪ್ರವಾಹದಲ್ಲಿ ಸಿಲುಕಿದ ಮೂವರು ಗರ್ಭಿಣಿ, ಇಬ್ಬರು ಬಾಲಕರು, ಒಂದು ಮಗು ಸೇರಿದಂತೆ 10ಕ್ಕು ಹೆಚ್ಚು ಜನರನ್ನು ಸಿಂದಗಿ ಅಗ್ನಿಶಾಮಕ ಸಿಬ್ಬಂದಿಯವರು ರಕ್ಷಣೆ ಮಾಡಿದರು.
ನೀರಿನಲ್ಲಿ ಸಿಲುಕಿದ ಜನರನ್ನು ದೋಣಿ ಮುಖಾಂತರ ರಕ್ಷಣೆ ಮಾಡಲಾಗುತ್ತಿದೆ. ಅಲ್ಲದೇ, 20ಕ್ಕೂ ಹೆಚ್ಚು ಕುಟುಂಬಸ್ಥರು ಮನೆಯನ್ನು ತೊರೆದು ಬೇರೆಡೆಗೆ ಸ್ಥಳಾಂತಗೊಂಡಿದ್ದಾರೆ. ಇನ್ನು ಸಹ ಭೀಮಾ ನದಿಯ ಪ್ರವಾಹ ತಗ್ಗಿಲ್ಲ. ಅದಕ್ಕಾಗಿ ಅಗ್ನಿಶಾಮಕ ಸಿಬ್ಬಂದಿಯವರು ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande