ಯಾದಗಿರಿ, 29 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಭೀಮಾ ನದಿ ಪ್ರವಾಹಕ್ಕೆ ಯಾದಗಿರಿ ಜಿಲ್ಲೆ ತತ್ತರಿಸಿದೆ. ಯಾದಗಿರಿ ನಗರ ಹಾಗೂ ನದಿ ಪಾತ್ರದ ಗ್ರಾಮಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿ ಹಲವು ಬಡಾವಣೆಗಳಿಗೆ ನೀರು ನುಗ್ಗಿದ್ದು, ಕೆಲ ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ.
ಇದೇ ವೇಳೆ ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದ ೨೦ಕ್ಕೂ ಹೆಚ್ಚು ಜನರನ್ನು ಎಸ್ ಡಿಆರ್ ಎಫ್ ಮತ್ತು ಅಗ್ನಿಶಾಮಕ ದಳದ ದೋಣಿ ಮೂಲಕ ರಕ್ಷಣೆ ಮಾಡಿದ್ದಾರೆ.
ನಾಯ್ಕಲ್ ಗ್ರಾಮದಲ್ಲಿ ರಾಜ್ಯ ಹೆದ್ದಾರಿ ಜಲಾವೃತವಾಗಿದ್ದು, ಸಿಂದಗಿ-ಕೊಡಂಗಲ್ ರಸ್ತೆ ಸಂಪರ್ಕ ಕಡಿತಗೊಂಡಿದೆ.
ವಡಗೇರಾ ತಾಲ್ಲೂಕಿನ ಬೆನಕನಹಳ್ಳಿ ಹಾಗೂ ಹಲವೆಡೆ ಗ್ರಾಮಗಳು ಸಂಪೂರ್ಣ ಸಂಪರ್ಕ ಕಳೆದುಕೊಂಡಿವೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa