ಬೆಂಗಳೂರು, 29 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ನೆಲಮಂಗಲ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಿಗ್ಗೆ ಸಂಭವಿಸಿದ ಅಪಘಾತದಿಂದ ಭಾರಿ ಸಂಚಾರ ದಟ್ಟಣೆ ಉಂಟಾಯಿತು.
ತುಮಕೂರು ಕಡೆಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕಂಟೇನರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ನೆಲಮಂಗಲ ಟೋಲ್ ಬಳಿ ಉರುಳಿ ಬಿದ್ದಿದೆ. ಲಾರಿ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ, ಸುಮಾರು 1 ಕಿಲೋಮೀಟರ್‌ವರೆಗೆ ಸಂಚಾರ ದಟ್ಟಣೆ ಉಂಟಾಯಿತು.
ಪೊಲೀಸರು ಸ್ಥಳಕ್ಕೆ ಧಾವಿಸಿ ಟ್ರಾಫಿಕ್ ನಿಯಂತ್ರಣ ಕೈಗೊಂಡಿದ್ದು, ಕ್ರೇನ್ ಸಹಾಯದಿಂದ ಕಂಟೇನರ್ ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲವೆಂದು ತಿಳಿದು ಬಂದಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa