ಬೆಂಗಳೂರು, 29 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ರಾಜ್ಯದ ಹಲವು ಭಾಗಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ಹಳದಿ ಎಚ್ಚರಿಕೆ ಘೋಷಿಸಲಾಗಿದೆ. ಗುಡುಗು-ಮಿಂಚು ಹಾಗೂ ಬಿರುಗಾಳಿಯ ಸಾಧ್ಯತೆ ಇರುವುದರಿಂದ ನಾಗರಿಕರು ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇದೇ ವೇಳೆ, ರಾಜ್ಯದ ಇತರ ಭಾಗಗಳಲ್ಲಿಯೂ ಚದುರಿದ ಮಳೆಯಾಗುವ ಸಾಧ್ಯತೆ ಇದೆ. ರೈತರು ಹಾಗೂ ಗ್ರಾಮೀಣ ಪ್ರದೇಶದ ಜನರು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa