ಬಳ್ಳಾರಿ ಕನ್ನಡ ಸಾಹಿತ್ಯ ಸಮ್ಮೇಳನ ;ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ಥಳ ಪರಿಶೀಲನೆ
ಬಳ್ಳಾರಿ, 29 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್: ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ ಆಯೋಜನೆ ಕುರಿತಂತೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಸೋಮವಾರ
ಬಳ್ಳಾರಿ  : ಕನ್ನಡ ಸಾಹಿತ್ಯ ಸಮ್ಮೇಳನ: ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ಥಳ ಪರಿಶೀಲನೆ


ಬಳ್ಳಾರಿ  : ಕನ್ನಡ ಸಾಹಿತ್ಯ ಸಮ್ಮೇಳನ: ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ಥಳ ಪರಿಶೀಲನೆ


ಬಳ್ಳಾರಿ, 29 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್: ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ ಆಯೋಜನೆ ಕುರಿತಂತೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಸೋಮವಾರ ಸ್ಥಳ ಪರಿಶೀಲನೆ ನಡೆಸಿದರು.

ನಗರದ ಕಪ್ಪಗಲ್ಲು ರಸ್ತೆಯ ಸಂಗನಕಲ್ಲು ಬೆಟ್ಟದ ಬಳಿಯ ಪ್ರದೇಶ, ಹೊರವಲಯದ ಕೊಳಗಲ್ ರಸ್ತೆಯ ವಿಮಾನ ನಿಲ್ದಾಣದ ಪ್ರದೇಶ ಹಾಗೂ ನಗರದ ಹೊರವಲಯದ ಹೊಸಪೇಟೆ ರಸ್ತೆಯ ಶ್ರೀ ಸದ್ಗುರು ಮಹಾದೇವ ತಾತನವರ ಮಠ ಹತ್ತಿರದ ದಾರದ ಮಿಲ್ ಪ್ರದೇಶದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸುವ ಸಂಬಂಧ ಸ್ಥಳ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್, ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕರಾದ ವರ್ತಿಕ ಕಟಿಯಾರ್, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್, ಸಹಾಯಕ ಆಯುಕ್ತ ಪಿ.ಪ್ರಮೋದ್, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಡಾ.ಶಿವಲಿಂಗಪ್ಪ ಹಂದ್ಯಾಳು ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ಪಾಲಿಕೆಯ ಸದಸ್ಯರು, ಕಸಾಪ ಪದಾಧಿಕಾರಿಗಳು ಹಾಗೂ ಇತರರು ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande