ಭೀಮಾ ತೀರದಲ್ಲಿ ಗುಂಡಿನ ದಾಳಿ ; ಗ್ರಾಮ ಪಂಚಾಯತಿ ಅಧ್ಯಕ್ಷ ಹತ್ಯೆ
ವಿಜಯಪುರ, 03 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಭೀಮಾ ತೀರದಲ್ಲಿ ಗುಂಡಿನ ಮೊರೆತ ಆಗಿರುವ ಘಟನೆ ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ನಡೆದಿದೆ. ದೇವರನಿಂಬರಗಿ ಗ್ರಾಮ ಪಂಚಾಯತಿ ಅಧ್ಯಕ್ಷ ಭೀಮನಗೌಡ ಬಿರಾದಾರ್ ಮೇಲೆ ಗುಂಡಿನ ದಾಳಿ ನಡೆದಿದೆ. ಮೂರು ಸುತ್ತು ಗುಂಡು ಹಾರಿಸಿ ದು
ಹತ್ಯೆ


ವಿಜಯಪುರ, 03 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಭೀಮಾ ತೀರದಲ್ಲಿ ಗುಂಡಿನ ಮೊರೆತ ಆಗಿರುವ ಘಟನೆ ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ನಡೆದಿದೆ.

ದೇವರನಿಂಬರಗಿ ಗ್ರಾಮ ಪಂಚಾಯತಿ ಅಧ್ಯಕ್ಷ ಭೀಮನಗೌಡ ಬಿರಾದಾರ್ ಮೇಲೆ ಗುಂಡಿನ ದಾಳಿ ನಡೆದಿದೆ. ಮೂರು ಸುತ್ತು ಗುಂಡು ಹಾರಿಸಿ ದುಷ್ಕರ್ಮಿಗಳು ಪರಾರಿ ಯಾಗಿದ್ದಾರೆ.

ತಲೆ ಹಾಗೂ ಎದೆಗೆ ಗುಂಡುಗಳು ತಗಲಿವೆ. ಹಳೆ ವೈಷಮ್ಯ ಹಿನ್ನೆಲೆ ಈ ಕೃತ್ಯ ಆಗಿದೆ. ಭೀಮಾ ತೀರದ ಮಹಾದೇವ ಬೈರಗೊಂಡ ಪರಮಾಪ್ತ ಬಿರಾದಾರ ಆಗಿದ್ದರು.

ಮೂರರಿಂದ ನಾಲ್ಕು ಜನ ಮುಸುಕುಧಾರಿಗಳಿಂದ ಕೃತ್ಯ ನಡೆದಿದ್ದು, ಗುಂಡು ಹಾರಿಸಿದ ಬಳಿಕ‌ ದುಷ್ಕರ್ಮಿಗಳು ಪರಾರಿ ಆಗಿದ್ದಾರೆ.

ದೇವರ ನಿಂಬರಗಿ ಗ್ರಾಮದ ಕಟಿಂಗ್ ಶಾಪ್ ನಲ್ಲಿ ಕ್ಷೌರ ಮಾಡಿಸಿಕೊಳ್ಳಲು ಭೀಮನಗೌಡ ಬಿರಾದಾರ್ ಬಂದಿದ್ದರು.

ಈ ವೇಳೆ ಕ್ಷೌರ ಮಾಡುವನ ಕಣ್ಣಿಗೆ ಖಾರದ ಪುಡಿ ಎರಚಿ ಕೃತ್ಯ ಮಾಡಿದ್ದಾರೆ. ವಿಜಯಪುರದ ಖಾಸಗಿ ಆಸ್ಪತ್ರೆಗೆ ಬೀಮನಗೌಡ ದೇಹ ರವಾನೆ ಮಾಡಿದ್ದಾರೆ‌. ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande