ಜರ್ಮನ್ ವಿದೇಶಾಂಗ ಸಚಿವ ವೆಡ್ಫುಲ್-ಜೈಶಂಕರ್ ಭೇಟಿ
ನವದೆಹಲಿ, 03 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಭಾರತ ಪ್ರವಾಸದಲ್ಲಿರುವ ಜರ್ಮನಿಯ ವಿದೇಶಾಂಗ ಸಚಿವ ಜೋಹಾನ್ ಡೇವಿಡ್ ವೆಡ್ಫುಲ್ಫ್ ಬುಧವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೇಂದ್ರ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಮತ್ತು ವಾಣಿಜ್ಯ–ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರನ್ನು ಪ್ರತ್ಯೇಕವಾಗಿ ಭೇಟಿ
ಜರ್ಮನ್ ವಿದೇಶಾಂಗ ಸಚಿವ ವೆಡ್ಫುಲ್-ಜೈಶಂಕರ್ ಭೇಟಿ


ನವದೆಹಲಿ, 03 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಭಾರತ ಪ್ರವಾಸದಲ್ಲಿರುವ ಜರ್ಮನಿಯ ವಿದೇಶಾಂಗ ಸಚಿವ ಜೋಹಾನ್ ಡೇವಿಡ್ ವೆಡ್ಫುಲ್ಫ್ ಬುಧವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೇಂದ್ರ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಮತ್ತು ವಾಣಿಜ್ಯ–ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಲಿದ್ದಾರೆ.

ಮಂಗಳವಾರ ಭಾರತಕ್ಕೆ ಆಗಮಿಸಿದ ವೆಡ್ಫುಲ್ಫ್, ಬೆಂಗಳೂರಿಗೆ ತೆರಳಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಗೆ ಭೇಟಿ ನೀಡಿ ಸಂಶೋಧನಾ ಚಟುವಟಿಕೆಗಳನ್ನು ವೀಕ್ಷಿಸಿದ್ದರು.

ವಿದೇಶಾಂಗ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ, ದೆಹಲಿಯಲ್ಲಿ ನಡೆಯಲಿರುವ ಈ ಉನ್ನತ ಮಟ್ಟದ ಸಭೆಗಳು ಭಾರತ–ಜರ್ಮನಿ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲಿವೆ. ಈ ಪಾಲುದಾರಿಕೆ ಸ್ಥಾಪನೆಯಾಗಿ ಈಗ 25 ವರ್ಷಗಳು ಪೂರೈಸುತ್ತಿದೆ ಎಂಬುದು ಗಮನಾರ್ಹ.

ವೆಡ್ಫುಲ್ಫ್ ಅವರ ಭೇಟಿಯು ದ್ವಿಪಕ್ಷೀಯ ವ್ಯಾಪಾರ, ಹೂಡಿಕೆ, ತಂತ್ರಜ್ಞಾನ ಸಹಕಾರ ಮತ್ತು ಜಾಗತಿಕ ಸವಾಲುಗಳ ಕುರಿತ ಚರ್ಚೆಗೆ ಮಹತ್ವ ಪಡೆದುಕೊಳ್ಳಲಿದೆ ಎಂದು ನಿರೀಕ್ಷಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande