ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನದ ವಿಚಾರಕ್ಕೆ ಅಧ್ಯಕ್ಷ ಹತ್ಯೆ
ವಿಜಯಪುರ, 03 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ದೇವರನಿಂಬರಗಿ ಗ್ರಾಮ ಪಂಚಾಯತಿ ಅಧ್ಯಕ್ಷ ಭೀಮನಗೌಡ ಬಿರಾದಾರ್ ಅವರನ್ನು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನ ವಿಚಾರವಾಗಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಭೀಮಾ ತೀರ ಕುಖ್ಯಾತಿಯ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರನಿ
ಹತ್ಯೆ


ವಿಜಯಪುರ, 03 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ದೇವರನಿಂಬರಗಿ ಗ್ರಾಮ ಪಂಚಾಯತಿ ಅಧ್ಯಕ್ಷ ಭೀಮನಗೌಡ ಬಿರಾದಾರ್ ಅವರನ್ನು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನ ವಿಚಾರವಾಗಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಭೀಮಾ ತೀರ ಕುಖ್ಯಾತಿಯ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರನಿಂಬರಗಿ ಗ್ರಾಮದ ಕ್ಷೌರದ ಅಂಗಡಿಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಭೀಮನಗೌಡ ಬಿರಾದಾರ್ ಮೇಲೆ ಗುಂಡಿನ ದಾಳಿಗೈದು ಹತ್ಯೆ ಮಾಡಲಾಗಿದೆ.

ಹತ್ಯೆಗೀಡಾದ ಭೀಮನಗೌಡ ಭಾಗಿಯಾಗಿದ್ದ ನಿನ್ನೆ ಚಡಚಣ ತಾಲೂಕಿನ ಹಾವಿನಾಳ ಗ್ರಾಮದಲ್ಲಿ ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇನ್ನು ಜಾಕೀರ್ ಮನಿಯಾರ್ ಹಾಗೂ ಇತತರಿಂದ ಕೃತ್ಯ ನಡೆದಿದೆ. ಕ್ಷೌರದ ಅಂಗಡಿಯಲ್ಲಿದ್ದಾಗ ಕಣ್ಣಿಗೆ ಖಾರದ ಪುಡಿ ಎರಚಿ ಐದು ಸುತ್ತು ಗುಂಡು ಹಾರಿಸಿ ರಾಡ್ ಹಾಗೂ ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ ಮಾಡಿದ್ದಾರೆ.

ತಲೆಗೆ ಐದು ಗುಂಡುಗಳು ತಗುಲಿವೆ. ಹಂತಕರ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ. ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande